dtvkannada

'; } else { echo "Sorry! You are Blocked from seeing the Ads"; } ?>

ಹುಬ್ಬಳ್ಳಿ: ಹದಿನಾರು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಇಲ್ಲಿನ ಗೋಕುಲ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಅತ್ಯಾಚಾರಕ್ಕೊಳಗಾಗಿರುವ ಬಾಲಕಿಯ ತಂದೆಯೊಂದಿಗೆ ಕೆಲಸ ಮಾಡುತ್ತಿದ್ದ ವ್ಯಕ್ತಿಯೇ ಈ ಕೃತ್ಯ ಎಸಗಿದ್ದು, ಇಲ್ಲಿನ ಮಾರುತಿನಗರ ನಿವಾಸಿ ಕೇಶವ ಶಿರವಾರ ಎಂದು ದೂರಿನಲ್ಲಿ ದಾಖಲಾಗಿದೆ.

'; } else { echo "Sorry! You are Blocked from seeing the Ads"; } ?>

ಇತ್ತೀಚೆಗೆ ಬಾಲಕಿ ತರಕಾರಿ ಹಾಗೂ ಔಷಧಿ ತರಲು ಹೊರಗೆ ಬಂದ ಸಂದರ್ಭದಲ್ಲಿ ಕೇಶವ ತನ್ನ ದ್ವಿಚಕ್ರ ವಾಹನದಲ್ಲಿ ಕೂರಿಸಿಕೊಂಡು ಅಲ್ಲಲ್ಲಿ ಓಡಾಡಿದ್ದಾನೆ. ನಂತರ ಅಕ್ಷಯ ಕಾಲನಿ ಬಳಿ ಕರೆದುಕೊಂಡು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಸಾಗರ ಇಂಗಳಹಳ್ಳಿ ಎಂಬಾತ ಈ ಕೃತ್ಯಕ್ಕೆ ಸಹಕಾರ ನೀಡಿದ್ದಾನೆಂದು ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಕೈಗೊಂಡಿದ್ದಾರೆ.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!