ಹಾಸನ: ಚಲಿಸುತ್ತಿದ್ದ ಸ್ಕೂಟರ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟುಹೋದ ಘಟನೆ ಹಾಸನ ನಗರದ ಎಂಜಿ ರಸ್ತೆಯಲ್ಲಿ ನಡೆದಿದೆ.
ಸ್ಕೂಟರ್ ಮಾಲೀಕರಾದ ಸಂಜೀವ್ ಎಂಬುವವರು ಎಂಸಿಎಫ್ ಉದ್ಯೋಗಿಯಾಗಿದ್ದು, ಕೆಲಸದ ನಿಮಿತ್ತ ತಮ್ಮ ಸ್ಕೂಟರ್‍ನಲ್ಲಿ ತೆರಳುತ್ತಿದ್ದರು. ಈ ವೇಳೆ ಚಲಿಸುತ್ತಿದ್ದ ಸ್ಕೂಟರ್ನಲ್ಲಿ ಏಕಾಏಕಿ ಹೊಗೆ ಕಾಣಿಸಿಕೊಂಡಿದೆ. ಇದರಿಂದ ಭಯಗೊಂಡ ಅವರು, ತಕ್ಷಣ ಸ್ಕೂಟರ್ ನಿಲ್ಲಿಸಿ ಕೆಳಗಿಳಿದಿದ್ದಾರೆ. ಅಷ್ಟರಲ್ಲಿ ಸ್ಕೂಟರ್ ಹೊತ್ತಿ ಉರಿಯಲಾರಂಭಿಸಿದೆ.
ಏಕಾಏಕಿ ಕಾಣಿಸಿಕೊಂಡ ಬೆಂಕಿಯ ಕೆನ್ನಾಲಿಗೆ ಸ್ಕೂಟರ್ ಸಂಪೂರ್ಣ ಸುಟ್ಟು ಹೋಗಿದೆ. ಸ್ಥಳದಲ್ಲಿದ್ದ ಸಾರ್ವಜನಿಕರು ಬೆಂಕಿ ನಂದಿಸಲು ಪ್ರಯತ್ನ ಪಟ್ಟರೂ ಕೂಡ ಸ್ಕೂಟರ್ ಭಾಗಶಃ ಸುಟ್ಟು ಕರಕಲಾಗಿದೆ. ಸ್ಕೂಟರ್‌ನಲ್ಲಿ ಬೆಂಕಿ ಕಾಣಿಸಿಕೊಳ್ಳಲು ಕಾರಣವೇನು ಎಂಬುದು ತಿಳಿದು ಬಂದಿಲ್ಲ.