ಚಿಕ್ಕಮಗಳೂರು: ಚಾರ್ಮಾಡಿ ಘಾಟ್ನ ಆಲೇಖಾನ್ ಬಳಿ 8 ಸಾವಿರ ಲೀಟರ್ ಪೆಟ್ರೋಲ್, 4 ಸಾವಿರ ಲೀಟರ್ ಡೀಸೆಲ್ ಸಾಗಿಸುತ್ತಿದ್ದ ಟ್ಯಾಂಕರ್ ಒಂದು ಪಲ್ಟಿಯಾಗಿದೆ.
ಟ್ಯಾಂಕರ್ ಮಂಗಳೂರಿನಿಂದ ಮಾಗುಂಡಿಗೆ ತೆರಳುತ್ತಿತ್ತು ಎಂಬ ಮಾಹಿತಿ ಲಭ್ಯವಾಗಿದೆ.ಪಲ್ಟಿಯಾದ ಟ್ಯಾಂಕರ್ನಿಂದ ತೈಲ ಸೋರಿಕೆಯಾಗುತ್ತಿದ್ದು ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಬಣಕಲ್ ಠಾಣೆಯ ಪೋಲಿಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾರಂಭಿಸಿದ್ದಾರೆ.