';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಚಿಕ್ಕಮಗಳೂರು: ಜಮೀನಿನಲ್ಲಿ ಕುರಿಗಳನ್ನು ಮೇಯಿಸಿದ್ದಕ್ಕೆ ವ್ಯಕ್ತಿ ಮೇಲೆ ಇನ್ನೋರ್ವ ವ್ಯಕ್ತಿ ಹಲ್ಲೆ ನಡೆಸಿದ ಘಟನೆ ಚಿಕ್ಕಮಗಳೂರು ತಾಲೂಕಿನ ಬೊಂಬೈಲ್ ಗ್ರಾಮದಲ್ಲಿ ನಡೆದಿದೆ. ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಮಾರ್ಗಮಧ್ಯೆ ಹಲ್ಲೆಗೊಳಗಾದ ವ್ಯಕ್ತಿ ಸಾವನ್ನಪ್ಪಿದ್ದಾನೆ.
ಹಲ್ಲೆಗೊಳಗಾಗಿದ್ದ ಮಂಜುನಾಥ್ (53) ಮೃತ ದುರ್ದೈವಿ, ಬಸಗೋಡು ಗ್ರಾಮದ ಕಿರಣ್ ಹಲ್ಲೆ ನಡೆಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಆರೋಪಿ ಕಿರಣ್ನನ್ನು ಬಂಧಿಸಿ ಕ್ರಮ ಕೈಗೊಳ್ಳುವಂತೆ ಮೃತ ಮಂಜುನಾಥ ಅವರ ಕುಟುಂಬಸ್ಥರು ಜಿಲ್ಲಾಡಳಿತವನ್ನು ಆಗ್ರಹಿಸಿದ್ದಾರೆ. ಮಲ್ಲಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.