dtvkannada

ಆನೇಕಲ್: ರಾಂಗ್ ರೂಟಲ್ಲಿ ಬಂದ ಕಾರಿಗೆ ಮತ್ತೊಂದು ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ತಮಿಳುನಾಡಿನ ಹೊಸೂರು ಬಳಿಯ ಸೂಳಗಿರಿಯಲ್ಲಿ ನಡೆದಿದೆ. ಕಾರಿನಲ್ಲಿ ತೆರಳುತ್ತಿದ್ದ ಇಬ್ಬರು ಅಪಘಾತದಲ್ಲಿ ದುರ್ಮರಣ ಹೊಂದಿದ್ದಾರೆ.

ಬೆಂಗಳೂರಿನ ವೈಯಾಲಿಕಾವಲ್ ನಿವಾಸಿ ಸುಮಂತ್ (21) ಮತ್ತು ಕೋರಮಂಗಲ ನಿವಾಸಿ ವಿನ್ಸೆಂಟ್ ಗೋಪಿ (34) ಮೃತ ದುರ್ದೈವಿಗಳು. ಕರ್ನಾಟಕದ ಗಡಿಗೆ ಹೊಂದಿಕೊಂಡಿರುವ ತಮಿಳುನಾಡು ಹೊಸೂರು ಸಮೀಪದ ಸೂಳಗಿರಿ ಎಚ್.ಪಿ ಪೆಟ್ರೋಲ್ ಬಂಕ್ ಎದುರು ಬೀಕರ ಅಪಘಾತ ಸಂಭವಿಸಿದ್ದು, ಕಾರು ಚಾಲಕರು ಸಾವನ್ನಪ್ಪಿದ್ದಾರೆ.

ಹೈವೇಯಲ್ಲಿ ಬರುತ್ತಿದ್ದ ಇಂಡಿಕಾ ಕಾರಿಗೆ ರಾಂಗ್ ರೂಟ್​ನಲ್ಲಿ ಬಂದ ಮತ್ತೊಂದು ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಸೂಳಗಿರಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

By dtv

Leave a Reply

Your email address will not be published. Required fields are marked *

error: Content is protected !!