ಬೆಂಗಳೂರು: ಕೊರೊನಾ ಆರ್ಭಟ, ಲಾಕ್‌ಡೌನ್ ಹೊಡೆತ ಎಲ್ಲ ಮುಗಿತು ಅನ್ನುವಷ್ಟರಲ್ಲಿ 3ನೇ ಅಲೆ ಭಯ ಜೊತೆಗೆ ದುಬಾರಿಯಾದ ಪೆಟ್ರೋಲ್, ಡೀಸೆಲ್, ಗ್ಯಾಸ್ ರೇಟ್. ಆಹಾರ ಸಾಮಾಗ್ರಿಗಳ ಬೆಲೆ ಏರಿಕೆ ಜನರು ದುಡಿದ ಹಣ ಹೊಟ್ಟೆಗೆ ಸಾಕಾಗ್ತಿಲ್ಲ. ಒಂದೆಡೆ ಜನರ ಆಕ್ರೋಶ ಆದ್ರೆ, ಮತ್ತೊಂದೆಡೆ ಅನ್ನದಾತರೂ ಸರ್ಕಾರದ ನೀತಿ ವಿರುದ್ಧ ಭಾರತ್ ಬಂದ್’ಗೆ ಕರೆ ನೀಡಿದ್ದಾರೆ.
ಕೃಷಿ ಕಾಯ್ದೆ ತಿದ್ದುಪಡಿ ವಿರೋಧಿಸಿ ರೈತ ಸಂಘಟನೆಗಳು ನಾಳೆ ಭಾರತ್ ಬಂದ್‌ಗೆ ಕರೆ ಕೊಟ್ಟಿದೆ. ಕೊವಿಡ್ ಹೊಡೆತ ತಿಂದಿರೋ ಸಂಘಟನೆಗಳು ಸಾರ್ವಜನಿಕರ ಟೀಕೆಗೆ ಗುರಿಯಾಗ್ತೀವಿ ಅಂತಾ ಬಂದ್‌ಗೆ ಆಸಕ್ತಿ ತೋರುತ್ತಿಲ್ಲ. ಹೀಗಾಗಿ ಬಂದ್‌ಗೆ ಬೆಂಬಲ ಕೊಡದಿರಲು ಬಹುತೇಕ ಸಂಘಟನೆಗಳು ನಿರ್ಧರಿಸಿದ್ದು, ನೈತಿಕ ಬೆಂಬಲವಷ್ಟೇ ನೀಡಿವೆ.ರೈತರು ಕರೆ ಕೊಟ್ಟಿರೋ ಬಂದ್‌ಗೆ ಬೆಂಗಳೂರು ಹೋಟೆಲ್ ಮಾಲೀಕರ ಸಂಘ ನೈತಿಕ ಬೆಂಬಲ ನೀಡಿದ್ದು, ಸಂಪೂರ್ಣ ಬೆಂಬಲ ನೀಡಿಲ್ಲ. ಹೀಗಾಗಿ ನಾಳೆ ಎಂದಿನಂತೆ ಹೋಟೆಲ್ ಓಪನ್ ಇರಲಿದೆ. ಅಲ್ಲದೇ, ಕೆಎಸ್ಆರ್’ಟಿಸಿ ಮತ್ತು ಬಿಎಂಟಿಸಿ ನೌಕರರ ಸಂಘವೂ ಬಂದ್‌ನಿಂದ ದೂರ ಉಳಿದಿದ್ದು, ಎಂದಿನಂತೆ ಬಸ್ ಓಡಿಸಲು ನೌಕರರು ನಿರ್ಧರಿಸಿದ್ದಾರೆ. ಅಲ್ಲದೇ ಲಾರಿ ಮಾಲೀಕರ ಸಂಘಟನೆ ಕೂಡಾ ನೈತಿಕ ಬೆಂಬಲವಷ್ಟೇ ನೀಡಿದ್ದು, ನಾಳೆ ಎಂದಿನಂತೆ ಲಾರಿಗಳನ್ನ ರಸ್ತೆಗಿಳಿಸಲು ತೀರ್ಮಾನಿಸಿದೆ. ನಮ್ಮ ಮೆಟ್ರೋ ಕೂಡಾ ಎಂದಿನಂತೆ ಸಂಚರಿಸಲಿದೆ.
ರಾಜ್ಯ ಟ್ಯಾಕ್ಸಿ ಮಾಲೀಕರ ಸಂಘಟನೆಯೂ ಬಂದ್‌ಗೆ ಬೆಂಬಲ ನೀಡಿಲ್ಲ. ಹೀಗಾಗಿ ಓಲಾ ಉಬರ್ ಸೇರಿ ಎಲ್ಲಾ ರೀತಿಯ ಟ್ಯಾಕ್ಸಿಗಳು ಸಂಚರಿಸಲಿವೆ.ಆಟೋ ಡ್ರೈವರ್ಸ್ ಯೂನಿಯನ್ ಮತ್ತು ಆಟೋ ಚಾಲಕರ ಸಂಘವೂ ನೈತಿಕ ಬೆಂಬಲವಷ್ಟೇ ನೀಡಿದ್ದು, ನಾಳೆ ಆಟೋ ಸಂಚಾರ ಇರಲಿದೆ. ಬೀದಿಬದಿ ವ್ಯಾಪಾರಿಗಳು ಕೂಡಾ ಕೊರೋನಾದಿಂದ ಕಂಗೆಟ್ಟು ಹೋಗಿದ್ದು, ಮತ್ತೊಂದು ಬಂದ್ ಮಾಡೋಕೆ ಆಸಕ್ತಿ ತೋರುತ್ತಿಲ್ಲ.ನಾಳೆ ಬೆಳಗ್ಗೆ 11 ಗಂಟೆಗೆ ಟೌನ್ ಹಾಲ್ನಿಂದ ಮೈಸೂರು ಬ್ಯಾಂಕ್ ಸರ್ಕಲ್ ವರೆಗೆ ರೈತರಿಂದ ಬೃಹತ್ ಪ್ರತಿಭಟನಾ ರ್ಯಾಲಿ ನಡೆಯಲಿದೆ. ಕೆ.ಆರ್. ಮಾರುಕಟ್ಟೆಯಿಂದ ಟೌನ್ ಹಾಲ್ವರಗೆ ಸಾವಿರಾರು ರೈತರು ಜಾಥಾ ನಡೆಸಲಿದ್ದಾರೆ.