';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ರವೀಂದ್ರ ಜಡೇಜ ಆಲ್‌ರೌಂಡರ್ ಆಟದ ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಐಪಿಎಲ್‌ನಲ್ಲಿ ಕೋಲ್ಕತ್ತ ನೈಟ್ ರೈಡರ್ಸ್ ವಿರುದ್ಧ ಭಾನುವಾರ ನಡೆದ ಪಂದ್ಯದಲ್ಲಿ ಎರಡು ವಿಕೆಟ್ ಅಂತರದ ರೋಚಕ ಗೆಲುವು ದಾಖಲಿಸಿದೆ.
ಅಂತಿಮ ಹಂತದಲ್ಲಿ ಕೇವಲ ಎಂಟು ಎಸೆತಗಳಲ್ಲಿ ತಲಾ ಎರಡು ಬೌಂಡರಿ ಹಾಗೂ ಸಿಕ್ಸರ್ ನೆರವಿನಿಂದ 22 ರನ್ ಗಳಿಸಿದ ರವೀಂದ್ರ ಜಡೇಜ, ಚೆನ್ನೈ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿದರು. ಇನ್ನಿಂಗ್ಸ್‌ನ ಕೊನೆಯ ಎಸೆತದಲ್ಲಿ ದೀಪಕ್ ಚಾಹರ್ ಗೆಲುವಿನ ರನ್ ಬಾರಿಸಿದರು.
15 ಓವರ್ ಅಂತ್ಯಕ್ಕೆ ಚೆನ್ನೈ ಮೂರು ವಿಕೆಟ್ ನಷ್ಟಕ್ಕೆ 127 ರನ್ ಗಳಿಸಿತ್ತು. ಅಂತಿಮ 30 ಎಸೆತಗಳಲ್ಲಿ ಗೆಲುವಿಗೆ 45 ರನ್‌ಗಳ ಅವಶ್ಯಕತೆಯಿತ್ತು. ಬ್ಯಾಟಿಂಗ್ ವಿಭಾಗದಲ್ಲಿ ಅಬ್ಬರಿಸಿದ ಜಡೇಜ ತಂಡಕ್ಕೆ ಜಯ ತಂದುಕೊಟ್ಟರು.