ದುಬೈ: ಐಪಿಎಲ್‌ನಲ್ಲಿ ನಾಯಕ ವಿರಾಟ್ ಕೊಹ್ಲಿ (51) ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್ (56) ಬಿರುಸಿನ ಅರ್ಧಶತಕಗಳ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಭಾನುವಾರ ಮುಂಬೈ ಇಂಡಿಯನ್ಸ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ನಿಗದಿತ 20 ಓವರ್‌ಗಳಲ್ಲಿ ಆರು ವಿಕೆಟ್ ನಷ್ಟಕ್ಕೆ 165 ರನ್‌ಗಳ ಸವಾಲಿನ ಮೊತ್ತ ಪೇರಿಸಿದೆ.
https://www.instagram.com/p/CUSlwoShvxf/?utm_medium=copy_link
ಐಪಿಎಲ್‌ನಲ್ಲಿ 42 ನೇ ಅರ್ಧಶತಕ ಬಾರಿಸಿದ ಕೊಹ್ಲಿ
ಅತ್ತ ನಾಯಕನ ಇನ್ನಿಂಗ್ಸ್ ಕಟ್ಟಿದ ವಿರಾಟ್ ಕೊಹ್ಲಿ ಆಕರ್ಷಕ ಅರ್ಧಶತಕ ಸಾಧನೆ ಮಾಡಿದರು. ಇವರಿಗೆ ಗ್ಲೆನ್ ಮ್ಯಾಕ್ಸ್‌ವೆಲ್ ಉತ್ತಮ ಸಾಥ್ ನೀಡಿದರು.
ಉಭಯ ತಂಡಗಳು ದ್ವಿತಿಯಾರ್ಧದಲ್ಲಿ ಸೋಲಿನಿಂದ ಕಂಗೆಟ್ಟಿದ್ದು, ಹೀಗಾಗಿ ಇಂದಿನ ಪಂದ್ಯದಲ್ಲಿ ಗೆಲುವು ಅನಿವಾರ್ಯವಾಗಿದೆ. ಪ್ರಸ್ತುತ ಅಂಕ ಪಟ್ಟಿಯಲ್ಲಿ ಆರ್ಸಿಬಿ ಮೂರನೇ ಸ್ಥಾನದಲ್ಲಿದ್ದರೆ, ಮೊದಲಾರ್ಧದಲ್ಲಿ ನಾಲ್ಕನೇ ಸ್ಥಾನದಲ್ಲಿ ಮುಂಬೈ ಇಂಡಿಯನ್ಸ್ ಇದೀಗ ಸತತ ಸೋಲುಗಳಿಂದ ಕಂಗೆಟ್ಟು ಆರನೇ ಸ್ಥಾನಕ್ಕೆ ಕುಸಿದಿದೆ. ಹೀಗಾಗಿ ಪ್ಲೇ ಆಫ್ ಆಸೆಯನ್ನು ಜೀವಂತವಿರಿಸಿಕೊಳ್ಳಲು ಇಂದಿನ ಪಂದ್ಯವು ಮುಂಬೈ ಪಾಲಿಗೆ ಮಹತ್ವದ್ದಾಗಿದೆ.