ದುಬೈ: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 54 ರನ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. ‘ಹ್ಯಾಟ್ರಿಕ್’ ಸೇರಿದಂತೆ ನಾಲ್ಕು ವಿಕೆಟ್ ಪಡೆದ ಹರ್ಷಲ್ ಪಟೇಲ್ ಆರ್‌ಸಿಬಿ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿದರು. ನಾಯಕ ವಿರಾಟ್ ಕೊಹ್ಲಿ (51) ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್ (56) ಸಹ ಅರ್ಧಶತಕಗಳ ಸಾಧನೆ ಮಾಡಿದರು.
ಮೊದಲು ನಾಯಕ ವಿರಾಟ್ ಕೊಹ್ಲಿ (51) ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್ (56) ಅರ್ಧಶತಕಗಳ ಅಬ್ಬರ ಬಳಿಕ ಹರ್ಷಲ್ ಪಟೇಲ್ ‘ಹ್ಯಾಟ್ರಿಕ್’ ವಿಕೆಟ್ (17ಕ್ಕೆ 4 ವಿಕೆಟ್) ಸಾಧನೆಯ ನೆರವಿನಿಂದ ರಾಯ್ ಚಾಲೆಂಜರ್ಸ್ ಬೆಂಗಳೂರು ತಂಡವು ಭಾನುವಾರ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಐಪಿಲ್ ಪಂದ್ಯದಲ್ಲಿ 54 ರನ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ.
That's that from Match 39.#RCB WIN by 54 runs!
— IndianPremierLeague (@IPL) September 26, 2021
Scorecard – https://t.co/KkzfsLzXUZ #RCBvMI #VIVOIPL pic.twitter.com/BjMwBoAlmJ
ಇದರೊಂದಿಗೆ ಯುಎಇನಲ್ಲಿ ನಡೆಯುತ್ತಿರುವ ಐಪಿಎಲ್ ಎರಡನೇ ಹಂತದ ಟೂರ್ನಿಯಲ್ಲಿ ಸತತ ಎರಡು ಸೋಲಿನ ಬಳಿಕ ವಿರಾಟ್ ಕೊಹ್ಲಿ ಬಳಗವು ಗೆಲುವಿನ ಹಾದಿಗೆ ಮರಳಿದೆ.
ಮೊದಲು ಬ್ಯಾಟಿಂಗ್ ನಡೆಸಿದ ಆರ್‌ಸಿಬಿ ಆರು ವಿಕೆಟ್ ನಷ್ಟಕ್ಕೆ 165 ರನ್‌ಗಳ ಸವಾಲಿನ ಮೊತ್ತ ಪೇರಿಸಿತ್ತು. ಬಳಿಕ ‘ಹ್ಯಾಟ್ರಿಕ್’ ಸೇರಿದಂತೆ ನಾಲ್ಕು ವಿಕೆಟ್ ಕಿತ್ತ ಹರ್ಷಲ್ ದಾಳಿಗೆ ನಲುಕಿದ ಮುಂಬೈ 18.1 ಓವರ್‌ಗಳಲ್ಲಿ 111 ರನ್‌ಗಳಿಗೆ ತನ್ನೆಲ್ಲ ವಿಕೆಟ್‌ಗಳನ್ನು ಕಳೆದುಕೊಂಡಿತು. ಯಜುವೇಂದ್ರ ಚಾಹಲ್ ಮೂರು ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್ ಎರಡು ವಿಕೆಟ್ ಕಿತ್ತು ಮಿಂಚಿದರು.
ಹ್ಯಾಟ್ರಿಕ್ ವಿಕೆಟ್ ಪಡೆದ ಹರ್ಷಲ್ ಪಟೇಲ್