';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಬೆಂಗಳೂರು: ಐಪಿಎಸ್ ಅಧಿಕಾರಿ ಡಾ. ಕೆ.ವಿ. ಜಗದೀಶ್ (44) ಅವರು ಅನಾರೋಗ್ಯದಿಂದಾಗಿ ನಗರದ ಎಚ್‌ಸಿಜಿ ಆಸ್ಪತ್ರೆಯಲ್ಲಿ ಭಾನುವಾರ ನಿಧನರಾದರು.
ಕೋಲಾರದ ಜಗದೀಶ್, ಎಂಬಿಬಿಎಸ್ ಪದವೀಧರರು. 2005ರಲ್ಲಿ ಕರ್ನಾಟಕ ಪೊಲೀಸ್ ಸೇವೆಗೆ ಸೇರಿದ್ದರು. 2012ರಲ್ಲಿ ಐಪಿಎಸ್ ಶ್ರೇಣಿಗೆ ಅರ್ಹತೆ ಪಡೆದಿದ್ದರು. ಬೆಂಗಳೂರು ಸಂಚಾರ ವಿಭಾಗದ ಡಿಸಿಪಿ ಸೇರಿದಂತೆ ಹಲವು ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದರು.
ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಹಲವು ವರ್ಷಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಇತ್ತೀಚಿನ ದಿನಗಳಲ್ಲಿ ಅವರ ಆರೋಗ್ಯ ತೀವ್ರ ಹದಗೆಟ್ಟಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಎಚ್‌ಸಿಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಜಗದೀಶ್ ಅವರ ಅಂತ್ಯಕ್ರಿಯೆಯನ್ನು ಹುಟ್ಟೂರಾದ ಕೋಲಾರದಲ್ಲಿ ನಡೆಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
ಅವರಿಗೆ ಪತ್ನಿ ಹಾಗೂ ಇಬ್ಬರು ಪುತ್ರರು ಇದ್ದಾರೆ.