ಹೈದರಾಬಾದ್: ಉತ್ತರ ಕರಾವಳಿ ಆಂಧ್ರಪ್ರದೇಶದ ಶ್ರೀಕಾಕುಲಂ ಜಿಲ್ಲೆಯಲ್ಲಿ ಗುಲಾಬ್ ಚಂಡಮಾರುತದ ಅಬ್ಬರಕ್ಕೆ ಬೋಟ್ ಸಮತೋಲನ ಕಳೆದುಕೊಂಡಿದ್ದು ಆರು ಮೀನುಗಾರರ ಪೈಕಿ, ಇಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಅದೇ ವೇಳೆ ಒಬ್ಬರು ನಾಪತ್ತೆಯಾಗಿದ್ದಾರೆ. ಪಲಸಾ ಗ್ರಾಮದ ಮೂವರು ಮೀನುಗಾರರು ಸುರಕ್ಷಿತವಾಗಿ ಈಜಿ ದಡ ಸೇರಿದ್ದಾರೆ. ಮೀನುಗಾರಿಕಾ ಸಚಿವ ಎಸ್ ಅಪ್ಪಲ ರಾಜು ನೌಕಾಪಡೆ ಅಧಿಕಾರಿಗಳಿಗೆ ರಕ್ಷಣಾ ಕಾರ್ಯಾಚರಣೆ ಆರಂಭಿಸುವಂತೆ ಕರೆ ನೀಡಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.
#WATCH | Srikakulam in Andhra Pradesh witnessed strong winds and heavy rainfall due to Cyclone Gulab (Earlier visuals)
As per IMD, the landfall process has commenced in coastal regions of Andhra Pradesh and Odisha pic.twitter.com/RKSLzv5cGs— ANI (@ANI) September 26, 2021
ಮಹಾರಾಷ್ಟ್ರದಾದ್ಯಂತ ಭಾರೀ ಮಳೆ ಎಚ್ಚರಿಕೆ:
ಗುಲಾಬ್ ಚಂಡಮಾರುತದ ಪ್ರಭಾವದಡಿಯಲ್ಲಿ ಮಹಾರಾಷ್ಟ್ರದ ಎಲ್ಲಾ 36 ಜಿಲ್ಲೆಗಳಿಗೆ ಸೋಮವಾರ ಮತ್ತು ಮಂಗಳವಾರ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ. ಮುನ್ಸೂಚನೆಯಂತೆ ಚಂದ್ರಪುರವು ಸೋಮವಾರ ರೆಡ್ ಅಲರ್ಟ್‌ನಲ್ಲಿದೆ. ಅದೇ ವೇಳೆ ಮುಂಬೈ ಮತ್ತು ನೆರೆಯ ಜಿಲ್ಲೆಗಳಾದ ಥಾಣೆ, ಪಾಲ್ಘರ್ ಮತ್ತು ಇತರ 17 ಜಿಲ್ಲೆಗಳಲ್ಲಿ ಘಾಟ್ ಪ್ರದೇಶದಲ್ಲಿ ಬಿರುಗಾಳಿ, ಗುಡುಗು ಮತ್ತು ಮಿಂಚಿನೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಸೋಮವಾರ ರಾಯಗಢ, ರತ್ನಗಿರಿ, ಪುಣೆ, ಸತಾರ, ನಾಸಿಕ್, ಪರಭಾನಿ, ಲಾತೂರ್, ಹಿಂಗೋಲಿ, ನಾಂದೇಡ್, ಯಾವತ್ಮಲ್, ಗಡ್ಚಿರೋಲಿಯಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ.