ದೆಹಲಿ: ಜೆಎನ್ಯು ವಿದ್ಯಾರ್ಥಿ ಸಂಘಟನೆಯ ನಾಯಕನಾಗಿದ್ದ ಕನ್ಹಯ್ಯಾ ಕುಮಾರ್ ಮತ್ತು ಗುಜರಾತ್ ದಲಿತ ನಾಯಕ ಜಿಗ್ನೇಶ್ ಮೇವಾನಿ ಇಂದು ಕಾಂಗ್ರೆಸ್ ಸೇರಲಿದ್ದಾರೆ. ಕನ್ಹಯ್ಯಾ ಕುಮಾರ್ ಅವರನ್ನು ಪಕ್ಷಕ್ಕೆ ಸ್ವಾಗತಿಸುವ ಪೋಸ್ಟರ್‌ಗಳು ಇಂದು ಬೆಳಿಗ್ಗೆ ದೆಹಲಿಯ ಕಾಂಗ್ರೆಸ್ ಕಚೇರಿಯ ಹೊರಗೆ ಕಾಣಿಸಿವೆ.
ಕನ್ಹಯ್ಯಾ ಕುಮಾರ್ ಅವರು 2019 ರ ಸಾರ್ವತ್ರಿಕ ಚುನಾವಣೆಗೆ ಮುನ್ನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ಸೇರಿದ್ದರು. ನಂತರ ಅವರು ತಮ್ಮ ಊರು ಬಿಹಾರದ ಬೇಗುಸರೈಯಿಂದ ಬಿಜೆಪಿಯ ಗಿರಿರಾಜ್ ಸಿಂಗ್ ವಿರುದ್ಧ ಸ್ಪರ್ಧಿಸಿ ಪರಾಭವಗೊಂಡರು.
ಜೆಎನ್ಯು ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಕನ್ಹಯ್ಯಾ ಕುಮಾರ್ ಅವರು ಸಂಸತ್ ದಾಳಿಯ ಮಾಸ್ಟರ್ ಮೈಂಡ್ ಗಲ್ಲುಶಿಕ್ಷೆಗೊಳಗಾದ ಅಫ್ಜಲ್ ಗುರು ಸಾವಿನ ಒಂದನೇ ವರ್ಷ ನಿಮಿತ್ತ ನಡೆದ ಸಮಾರಂಭದಲ್ಲಿ “ದೇಶವಿರೋಧಿ ಘೋಷಣೆಗಳನ್ನು ಕೂಗಿದ್ದಾರೆ ಎಂಬ ಆರೋಪದಲ್ಲಿ ಜೈಲುಶಿಕ್ಷೆ ಅನುಭವಿಸಿದ್ದರು. ಗುಜರಾತ್‌ನಲ್ಲಿ ವಡ್ಗಾಮ್ ಕ್ಷೇತ್ರವನ್ನು ಪ್ರತಿನಿಧಿಸುವ ಶಾಸಕರಾದ ಜಿಗ್ನೇಶ್ ಮೇವಾನಿ ಕಾಂಗ್ರೆಸ್ ಸೇರುವುದರಿಂದ ಮುಂದಿನ ವರ್ಷ ನಡೆಯಲಿರುವ ಚುನಾವಣೆಯಲ್ಲಿ ಪ್ರಧಾನ ಪಾತ್ರವಹಿಸಲಿದ್ದಾರೆ.
Delhi | Posters welcoming Kanhaiya Kumar into Congress put up outside the Congress office ahead of his proposed joining pic.twitter.com/NucdHRXCt5
'; } else { echo "Sorry! You are Blocked from seeing the Ads"; } ?>