ಪುತ್ತೂರು, ಸೆ.28: ಮಾಡಾವು ಅರಿಕ್ಕಿಲ ನಿವಾಸಿ ಉಮರ್ ಕುಂಞಿ(28)ಅನಾರೋಗ್ಯದಿಂದ ಇಂದು ಮಧ್ಯಾಹ್ನ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಅರಿಕ್ಕಿಲ ನಿವಾಸಿ ಸುಲೈಮಾನ್ ರವರ ಮಗ ಉಮರ್ ಕುಂಞಿ ಅನಾರೋಗ್ಯ ನಿಮಿತ್ತ ಪುತ್ತೂರು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಆರೋಗ್ಯದಲ್ಲಿ ಏರುಪೇರಾದ ಕಾರಣ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮದ್ಯಾಹ್ನ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮೃತರು ತಂದೆ ತಾಯಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.