dtvkannada

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 14ನೇ ಆವೃತ್ತಿಯ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಬುಧವಾರ ದುಬೈಯಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಏಳು ವಿಕೆಟ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. ಬೌಲರ್‌ಗಳ ನಿಖರ ದಾಳಿಯ ಬಳಿಕ ಗ್ಲೆನ್ ಮ್ಯಾಕ್ಸ್‌ವೆಲ್ (30 ಎಸೆತಗಳಲ್ಲಿ ಅಜೇಯ ಅರ್ಧಶತಕ) ಹಾಗೂ ಶ್ರೀಕರ್ ಭರತ್ (44) ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿದರು.

ಬೌಲರ್‌ಗಳ ಸಾಂಘಿಕ ದಾಳಿಯ ಬಳಿಕ ಬ್ಯಾಟ್ಸ್‌ಮನ್‌ಗಳ ಸಮಯೋಚಿತ ಆಟದ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಬುಧವಾರ ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ ಏಳು ವಿಕೆಟ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ.

ಈ ಮೂಲಕ ಪ್ಲೇ-ಆಫ್ ಪ್ರವೇಶದತ್ತ ದಿಟ್ಟ ಹೆಜ್ಜೆಯನ್ನಿಟ್ಟಿದೆ. ಆರ್‌ಸಿಬಿ ಬೌಲರ್‌ಗಳ ನಿಖರ ದಾಳಿಗೆ ತತ್ತರಿಸಿದ ರಾಜಸ್ಥಾನ್, ಒಂಬತ್ತು ವಿಕೆಟ್ ನಷ್ಟಕ್ಕೆ 149 ರನ್ ಗಳಿಸಲಷ್ಟೇ ಸಾಧ್ಯವಾಯಿತು.

ಬಳಿಕ ಗುರಿ ಬೆನ್ನತ್ತಿದ ಆರ್‌ಸಿಬಿ 17.1 ಓವರ್‌ಗಳಲ್ಲಿ ಮೂರು ವಿಕೆಟ್ ನಷ್ಟಕ್ಕೆ ಗುರಿ ತಲುಪಿತು. ಗ್ಲೆನ್ ಮ್ಯಾಕ್ಸ್‌ವೆಲ್ 30 ಎಸೆತಗಳಲ್ಲಿ ಅಜೇಯ ಅರ್ಧಶತಕ ಬಾರಿಸಿ ಅಬ್ಬರಿಸಿದರು. ಶ್ರೀಕರ್ ಭರತ್ (44) ಸಹ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದರು. 

ಬೌಲಿಂಗ್‌ನಲ್ಲಿ ಹರ್ಷಲ್ ಪಟೇಲ್ ಮೂರು ಮತ್ತು ಯಜುವೇಂದ್ರ ಚಾಹಲ್ ಹಾಗೂ ಶಹಬಾಜ್ ಅಹ್ಮದ್ ತಲಾ ಎರಡು ವಿಕೆಟ್ ಕಬಳಿಸಿ ಮಿಂಚಿದರು. 

ಮೂರನೇ ಸ್ಥಾನದಲ್ಲಿ ಆರ್‌ಸಿಬಿ:
ಆರ್‌ಸಿಬಿ 11 ಪಂದ್ಯಗಳಲ್ಲಿ ಏಳು ಗೆಲುವಿನೊಂದಿಗೆ, 14 ಪಾಯಿಂಟ್‌ಗಳಿಗೆ ತಲುಪಿ ಮೂರನೇ ಸ್ಥಾನದಲ್ಲಿದ್ದಾರೆ. ರಾಜಸ್ಥಾನ್ ರಾಯಲ್ಸ್ 11 ಪಂದ್ಯದಲ್ಲಿ ಏಳನೇ ಸೋಲು ಅನುಭವಿಸಿ, ಎಂಟು ಪಾಯಿಂಟ್‌ಗಳೊಂದಿಗೆ ಏಳನೇ ಸ್ಥಾನದಲ್ಲಿದ್ದಾರೆ.

By dtv

Leave a Reply

Your email address will not be published. Required fields are marked *

error: Content is protected !!