';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಮಂಗಳೂರು: ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ನಡೆಸಿ ಬಳಿಕ ಆಕೆ ಏಳು ತಿಂಗಳ ಗರ್ಭಿಣಿಯಾದ ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಸವಣಾಲು ಎಂಬಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಅತ್ಯಾಚಾರ ಎಸಗಿದ ಇಬ್ಬರು ಆರೋಪಿಗಳಾದ ಸ್ಥಳೀಯ ನಿವಾಸಿ ರವೀಂದ್ರ ಹಾಗೂ ಯೋಗೀಶ್ ನನ್ನು ಬೆಳ್ತಂಗಡಿ ಪೆÇಲೀಸರು ಪೋಕ್ಸೋ ಕಾಯ್ದೆಯಡಿ ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
10ನೇ ತರಗತಿ ವಿದ್ಯಾಭ್ಯಾಸ ಮಾಡಿಕೊಂಡಿದ್ದ ಬಾಲಕಿಯನ್ನು ಜೆಸಿಬಿ ಚಾಲಕನಾಗಿದ್ದ ರವೀಂದ್ರ ಐದು ಬಾರಿ ಅತ್ಯಾಚಾರ ನಡೆಸಿದ್ದು, ಬಾಲಕಿಯ ಸಂಬಂಧಿ ಯೋಗೀಶ್ ಎಂಬಾತ ಎರಡು ಬಾರಿ ಅತ್ಯಾಚಾರ ನಡೆಸಿದ್ದಾನೆ.
ಬಾಲಕಿಯ ಶಾಲೆಗೆ ಆರೋಗ್ಯ ತಪಾಸಣೆಗೆ ಬಂದಿದ್ದ ವೈದ್ಯರು ವಿದ್ಯಾರ್ಥಿಯ ದೇಹಸ್ಥಿತಿ ನೋಡಿ ಅನುಮಾನಗೊಂಡಿದ್ದು, ಬಳಿಕ ಬೆಳ್ತಂಗಡಿ ವೈದ್ಯರಲ್ಲಿ ಪರೀಕ್ಷಿಸಿದಾಗ ಬಾಲಕಿ ಗರ್ಭಿಣಿಯಾಗಿರುವ ವಿಚಾರ ಬೆಳಕಿಗೆ ಬಂದಿದೆ.