ಕೊಚ್ಚಿ: ತನ್ನ ಪ್ರೀತಿಯನ್ನು ಒಪ್ಪಿಕೊಳ್ಳಲಿಲ್ಲ ಎಂಬ ಕೋಪದಲ್ಲಿ ಯುವತಿಯ ಕತ್ತು ಸೀಳಿ ಕೊಲೆ ಮಾಡಿದ ಘಟನೆ ಕೇರಳದ ಕೊಟ್ಟಾಯಂನಲ್ಲಿ ನಡೆದಿದೆ. ಪಾಲಾದಲ್ಲಿರುವ ಸೇಂಟ್ ಥಾಮಸ್ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದ ನಿತಿನಾಮೋಲ್ ಇಂದು ಪರೀಕ್ಷೆ ಬರೆದು ಎಕ್ಸಾಂ ಹಾಲ್ನಿಂದ ಹೊರಬರುವಾಗ ಎದುರು ಬಂದ ಅಭಿಷೇಕ್ ಎಂಬ ಯುವಕ ಚಾಕುವಿನಿಂದ ಆಕೆಯ ಕುತ್ತಿಗೆ ಕೊಯ್ದಿದ್ದಾನೆ. ಕಾಲೇಜು ಆವರಣದಲ್ಲಿಯೇ ಈ ಘಟನೆ ನಡೆದಿದ್ದು, ರಕ್ತದ ಮಡುವಿನಲ್ಲಿ ಬಿದ್ದಿದ್ದ ನಿತಿನಾಮೋಲ್ಳನ್ನು ಆಕೆಯ ಸ್ನೇಹಿತರು ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ, ವಿಪರೀತ ರಕ್ತ ಹೋಗಿದ್ದರಿಂದ ಆಕೆ ಸಾವನ್ನಪ್ಪಿದ್ದಾಳೆ.
ಅಭಿಷೇಕ್ ಹಾಗೂ ನಿತಿನಾಮೋಲ್ ಕ್ಲಾಸ್ಮೇಟ್ಗಳಾಗಿದ್ದು, ಆಕೆಯನ್ನು ಪ್ರೀತಿಸುತ್ತಿದ್ದ. ಆದರೆ, ಆಕೆ ಆತನನ್ನು ಪ್ರೀತಿಸಲು ಸಾಧ್ಯವಿಲ್ಲ ಎಂದಿದ್ದಳು. ಇದರಿಂದ ಅವಮಾನಗೊಂಡಿದ್ದ ಅಭಿಷೇಕ್ ಇಂದು ಪರೀಕ್ಷೆ ಮುಗಿಸಿ ಬಂದ ಆಕೆಯ ಕುತ್ತಿಗೆಯನ್ನು ಸೀಳಿ ಕೊಲೆ ಮಾಡಿದ್ದಾನೆ. ಕೆಳಗೆ ಬಿದ್ದ ಆಕೆಯನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದಾನೆ.
ಸೆಕ್ಯುರಿಟಿ ಸಿಬ್ಬಂದಿ ಕೆಳಗೆ ಬಿದ್ದಿದ್ದ ನಿತಿನಾಮೋಲ್ಳನ್ನು ಮೊದಲು ನೋಡಿದ್ದು, ಜೋರಾಗಿ ಕಿರುಚಾಡಿದ್ದಾರೆ. ಆಗ ಆಕೆಯ ಸ್ನೇಹಿತರು ಹಾಗೂ ಶಿಕ್ಷಕರು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಅಷ್ಟರಲ್ಲಿ ಆಕೆ ಸಾವನ್ನಪ್ಪಿದ್ದಳು. ಅಭಿಷೇಕ್ನನ್ನು ಪೊಲೀಸರು ಹಿಡಿದಿದ್ದು, ವಿಚಾರಣೆ ನಡೆಸುತ್ತಿದ್ದಾರೆ.