ಸೌದಿ ಅರೇಬಿಯ: ಹಲವು ವರ್ಷಗಳಿಂದ ಸೌದಿ ಅರೇಬಿಯಾದ ಜುಬೈಲ್ ನಲ್ಲಿ ಉದ್ಯೋಗದಲ್ಲಿದ್ದ ಹಸನ್ ಕನ್ನಂಗಾರ್ ನಿನ್ಮೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಪಡುಬಿದ್ರಿ ಕನ್ನಂಗಾರ್ ನಿವಾಸಿಯಾಗಿದ್ದ ಹಸನ್ ರವರು ಹಲವು ಸಂಘಸಂಸ್ಥೆಗಳಲ್ಲಿ ಗುರುತಿಸುತ್ತಾ ಎಲ್ಲರ ಜೊತೆ ಸ್ನೇಹಜೀವಿಯಾಗಿದ್ದರು. ಸರಳ ಸಜ್ಜನ ವ್ಯಕ್ತಿತ್ವದ ಸಹೋದರನ ಅಕಾಲಿಕ ಮರಣದಿಂದ ಕುಟುಂಬಸ್ಥರು ಕಂಗಾಲಾಗಿದ್ದಾರೆ.
ಮೃತರು ಪತ್ನಿ, ಇಬ್ಬರು ಮಕ್ಕಳು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.