ಪುತ್ತೂರು, ಅ.2: ಕೂರ್ನಡ್ಕ- ಮರೀಲ್ ಹನಫಿ ಮಸೀದಿಯ ಹತ್ತಿರ ಚರಂಡಿ ಅವ್ಯವಸ್ಥೆಯನ್ನು ಸರಿಪಡಿಸಲು ಆಗ್ರಹಿಸಿ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಕೂರ್ನಡ್ಕ ವಾರ್ಡ್ ಸಮಿತಿಯ ವತಿಯಿಂದ ಹನಫಿ ಮಸೀದಿಯ ಬಳಿ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎಸ್.ಡಿ.ಪಿ.ಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ಜೊತೆ ಕಾರ್ಯದರ್ಶಿ ಯಹ್ಯಾ ಕೆ.ಹೆಚ್ – ಚರಂಡಿ ಅವ್ಯವಸ್ಥೆಯಿಂದ ಮಳೆಗಾಲದಲ್ಲಿ ಸ್ಥಳೀಯ ಮನೆಗಳು ಜಲಾವೃತವಾಗುತ್ತಿದ್ದು ತಾತ್ಕಾಲಿಕವಾಗಿ ಬಾಡಿಗೆ ಮನೆಗೆ ಸ್ಥಳಾಂತರ ಆಗಬೇಕಾದ ಅನಿವಾರ್ಯತೆ ಎದುರಾಗುತ್ತಿದೆ, ಇದರ ಬಗ್ಗೆ ಸ್ಥಳೀಯ ನಿವಾಸಿಗಳು ಎಷ್ಟೇ ಮನವಿ ಸಲ್ಲಿಸಿದರೂ ಇಷ್ಟರ ವರೆಗೆ ಪರಿಹಾರ ಕಾರ್ಯ ನಡೆದಿಲ್ಲ. ಹಾಗಾಗಿ ಎಸ್.ಡಿ.ಪಿ.ಐ ಪಕ್ಷವು ಇದನ್ನು ಗಂಭೀರವಾಗಿ ಮನಗಂಡು ಕೂಡಲೇ ಪರಿಹಾರ ಕಲ್ಪಿಸಲು ಒತ್ತಾಯಿಸುತ್ತಿದ್ದೇವೆ ಎಂದರು.
ಎಸ್.ಡಿ.ಪಿ.ಐ ನಗರ ಸಮಿತಿ ಅಧ್ಯಕ್ಷರಾದ ಸಿರಾಜ್ ಎ.ಕೆ ಮಾತನಾಡಿ ಸ್ಥಳೀಯ ನಿವಾಸಿಗಳು ಸ್ವಂತ ಮನೆಯಿಂದ ಬಾಡಿಗೆ ಮನೆಗೆ ಸ್ಥಳಾಂತರಗೊಂಡು 6 ತಿಂಗಳು ಕಳೆದು ಹೋಗಿವೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕೆಂದು ಆಗ್ರಹಿಸಿದರು.
ಮುಖ್ಯ ಇಂಜಿನಿಯರ್ ಸ್ಥಳಕ್ಕೆ ಆಗಮನ:
ಪ್ರತಿಭಟನಾ ಸ್ಥಳಕ್ಕೆ ಪುತ್ತೂರು ನಗರ ಸಭೆಯ ಮುಖ್ಯ ಇಂಜಿನಿಯರ್ ಆಗಮಿಸಿ ಆದಷ್ಟು ಶೀಘ್ರದಲ್ಲಿ ಸಮಸ್ಯೆ ಬಗೆಹರಿಸುವ ಭರವಸೆಯನ್ನು ನೀಡಿ ಮನವಿ ಸ್ವೀಕರಿಸಿದರು.
ಈ ಸಂದರ್ಭದಲ್ಲಿ SDPI ಕೂರ್ನಡ್ಕ ವಾರ್ಡ್ ಸಮಿತಿ ಅಧ್ಯಕ್ಷರಾದ ಹಾರೀಸ್, ಪಿ.ಎಫ್.ಐ ಸಿಟಿ ಡಿವಿಝನ್ ಅಧ್ಯಕ್ಷರಾದ ಉಮ್ಮರ್ K.S, ಹಾಗೂ ವಾರ್ಡಿನ ಪದಾಧಿಕಾರಿಗಳು, ಪಕ್ಷದ ಕಾರ್ಯಕರ್ತರು, ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.