ಶಾರ್ಜಾ: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಶನಿವಾರ ನಡೆದ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ನಾಲ್ಕು ವಿಕೆಟ್ ಅಂತರದ ರೋಚಕ ಗೆಲುವು ದಾಖಲಿಸಿದೆ. ಈ ಮೂಲಕ ಮುಂಬೈ ಪ್ಲೇ-ಆಫ್ ಹಾದಿ ಮತ್ತಷ್ಟು ಕಠಿಣವೆನಿಸಿದೆ.
ಶ್ರೇಯಸ್ ಅಯ್ಯರ್ (33) ಹಾಗೂ ರವಿಚಂದ್ರನ್ ಅಶ್ವಿನ್ (20) ಸಮಯೋಚಿತ ಬ್ಯಾಟಿಂಗ್ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಶನಿವಾರ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ನಾಲ್ಕು ವಿಕೆಟ್ ಅಂತರದ ರೋಚಕ ಗೆಲುವು ದಾಖಲಿಸಿದೆ.
ಇದರೊಂದಿಗೆ ಮುಂಬೈ ಪ್ಲೇ-ಆಫ್ ಹಾದಿ ಮತ್ತಷ್ಟು ಕಠಿಣವೆನಿಸಿದೆ.
ಆವೇಶ್ ಖಾನ್ (15ಕ್ಕೆ 3) ಹಾಗೂ ಅಕ್ಷರ್ ಪಟೇಲ್ (21ಕ್ಕೆ 3) ದಾಳಿಗೆ ತತ್ತರಿಸಿರುವ ಮುಂಬೈ ಇಂಡಿಯನ್ಸ್, ನಿಗದಿತ 20 ಓವರ್‌ಗಳಲ್ಲಿ ಎಂಟು ವಿಕೆಟ್ ನಷ್ಟಕ್ಕೆ 129 ರನ್ ಗಳಿಸಲಷ್ಟೇ ಸಾಧ್ಯವಾಯಿತು.
ಬಳಿಕ ಸುಲಭ ಗುರಿ ಬೆನ್ನತ್ತಿದ ಡೆಲ್ಲಿ ಒಂದು ಹಂತದಲ್ಲಿ 13.1 ಓವರ್‌ಗಳಲ್ಲಿ 93 ರನ್ನಿಗೆ ಆರು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಈ ಹಂತದಲ್ಲಿ ಜೊತೆಗೂಡಿದ ಅಯ್ಯರ್ ಹಾಗೂ ಅಶ್ವಿನ್ ಮುರಿಯದ ಏಳನೇ ವಿಕೆಟ್‌ಗೆ 37 ರನ್‌ಗಳ ಜೊತೆಯಾಟ ನೀಡಿ ತಂಡವನ್ನು ಗೆಲುವಿನ ದಡ ಸೇರಿಸಿದರು.