dtvkannada

ಪುತ್ತೂರು: ಬ್ಲಾಕ್ ಕಾಂಗ್ರೆಸ್ ಪುತ್ತೂರು ಮತ್ತು ಕಾರ್ಮಿಕ ವಿಭಾಗ ಪುತ್ತೂರು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ದಿನಾಂಕ 03-10-2021 ರ ಭಾನುವಾರ ನಡೆದ ಕಾರ್ಮಿಕ ಘಟಕ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಪುತ್ತೂರು ನಗರ ಕಾಂಗ್ರೆಸ್ ಕಚೇರಿ ಯಲ್ಲಿ ನಡೆಯಿತು.

ನೂತನ ಕಾರ್ಮಿಕ ಘಟಕದ ಅಧ್ಯಕ್ಷರಾಗಿ ಶಾರೂನ್ ಸಿಕ್ವೇರಾ ಸಾಮೆತ್ತಡ್ಕ ಹಾಗು ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ಜಲೀಲ್ ಗೋಳಿಕಟ್ಟೆ ಇವರು ಆಯ್ಕೆಯಾದರು.

ಈ ಸಂದರ್ಭದಲ್ಲಿ ಪುತ್ತೂರಿನ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾರ್ಮಿಕ ಘಟಕದ ಅಧ್ಯಕ್ಷರು, ಬ್ಲಾಕ್ ಪದಾಧಿಕಾರಿಗಳು ಹಾಗೂ ಪುತ್ತೂರು ನಗರ ಕಾಂಗ್ರೆಸ್’ನ ಮುಂಚೂಣಿ ಘಟಕದ ಅಧ್ಯಕ್ಷರು ಭಾಗವಹಿಸಿದರು.

By dtv

Leave a Reply

Your email address will not be published. Required fields are marked *

error: Content is protected !!