dtvkannada

ನವದೆಹಲಿ: ಓಮನ್ ಕಡೆ ತೆರಳಿರುವ ಶಾಹೀನ್ ಚಂಡಮಾರುತದ ಅಬ್ಬರಕ್ಕೆ ಈಗಾಗಲೇ 3ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಚಂಡಮಾರುತದ ಪ್ರಯುಕ್ತ ಓಮನ್​ನಲ್ಲಿ ಭಾರೀ ಮಳೆಯಾಗುತ್ತಿದ್ದು, ಕರಾವಳಿ ತೀರದಲ್ಲಿ ಬಿರುಗಾಳಿ ಬೀಸಲಾರಂಭಿಸಿದೆ. ಇದರಿಂದ ಮಸ್ಕತ್​ನಿಂದ ತೆರಳುತ್ತಿದ್ದ ವಿಮಾನಗಳ ಸಂಚಾರ ಸ್ಥಗಿತವಾಗಿದೆ. ಇರಾನ್​ನಲ್ಲೂ ಶಾಹೀನ್ ಚಂಡಮಾರುತದ ಅಬ್ಬರ ಜೋರಾಗಿದ್ದು, 6ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ.

ಓಮನ್​ನಲ್ಲಿ ಮಳೆ ಸುರಿದು, ಭೂಕುಸಿತದಿಂದ ಇಬ್ಬರು ಸಾವನ್ನಪ್ಪಿದ್ದಾರೆ. ಮಗುವೊಂದು ಪ್ರವಾಹದ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದೆ. ಓಮನ್​ನಲ್ಲಿ ರಕ್ಷಣಾ ತಂಡಗಳು ಬೀಡುಬಿಟ್ಟಿದ್ದು, ಶವಗಳನ್ನು ಹೊರಗೆ ತೆಗೆದಿದ್ದಾರೆ. ಗಂಟೆಗೆ 120 ಕಿ.ಮೀ. ವೇಗದಲ್ಲಿ ಗಾಳಿ ಬೀಸುತ್ತಿರುವುದರಿಂದ ವಿಮಾನ ಸಂಚಾರ ವ್ಯತ್ಯಯವಾಗಿದೆ.

ಮಸ್ಕತ್​ನಲ್ಲಿ ರಸ್ತೆಯಲ್ಲಿ ನಿಲ್ಲಿಸಿದ್ದ ವಾಹನಗಳು ಮುಳುಗಡೆಯಾಗಿ, ಮನೆಯೊಳಗೆ ನೀರು ನುಗ್ಗಿದೆ. ಶಾಹೀನ್ ಚಂಡಮಾರುತದಿಂದ ಉಂಟಾಗುತ್ತಿರುವ ಅಪಾಯವನ್ನು ತಗ್ಗಿಸಲು ಹಲವೆಡೆ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗಿದೆ. ಇನ್ನೂ ಚಂಡಮಾರುತದ ಅಬ್ಬರ ಹೆಚ್ಚುತ್ತಲೇ ಇದ್ದು, ಸ್ಥಳೀಯ ಸರ್ಕಾರಗಳು ಅಪಾಯವನ್ನು ನಿಯಂತ್ರಿಸಲು ಮುನ್ನೆಚ್ಚರಿಕೆ ವಹಿಸಿವೆ. ಓಮನ್​ನಲ್ಲಿ ಮಳೆ ಹೆಚ್ಚಾಗಿರುವುದರಿಂದ 2 ದಿನಗಳ ರಾಷ್ಟ್ರೀಯ ರಜೆಯನ್ನು ಘೋಷಿಸಲಾಗಿದೆ.

By dtv

Leave a Reply

Your email address will not be published. Required fields are marked *

error: Content is protected !!