dtvkannada

ಮೈಸೂರು: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ತಾಯಿ ಮತ್ತು ಮಗ ಸ್ಥಳದಲ್ಲೇ ಮೃತಪಟ್ಟ ಘಟನೆ ಮೈಸೂರಿನ ದಟ್ಟಗಳ್ಳಿ ಸಮೀಪದ ರಾಜರಾಜೇಶ್ವರಿನಗರ ರಿಂಗ್‌ರಸ್ತೆ ಜಂಕ್ಷನ್‌ನಲ್ಲಿ ನಡೆದಿದೆ.

ದಟ್ಟಗಳ್ಳಿ ನಿವಾಸಿ ಗುಣಲಕ್ಷ್ಮೀ (35) ಹಾಗೂ ಇವರ ಪುತ್ರ ದೈವಿಕ್ (12) ಮೃತಪಟ್ಟವರು. ಕಾರನ್ನು ಚಾಲನೆ ಮಾಡುತ್ತಿದ್ದ ಗುಣಲಕ್ಷ್ಮಿ ಅವರ ಪತಿ ಜಗದೀಶ್‌ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

‘ಇವರು ಕುಶಾಲನಗರದಿಂದ ತಮ್ಮ ನಿವಾಸಕ್ಕೆ ತೆರಳುವಾಗ ಅಪಘಾತ ನಡೆದಿದೆ. ಕಾರಿನಲ್ಲಿದ್ದ ಒಂದು ಏರ್‌ಬ್ಯಾಗ್‌ ತೆರೆದುಕೊಂಡಿದ್ದರಿಂದ ಜಗದೀಶ್ ಅವರು ಅಪಾಯದಿಂದ ಪಾರಾಗಿದ್ದಾರೆ. ಡಿಕ್ಕಿಯ ರಭಸಕ್ಕೆ ಕಾರಿನ ಟೈರ್‌ಗಳು ಸಿಡಿದಿವೆ. ವಾಹನ ನಜ್ಜುಗುಜ್ಜಾಗಿದೆ. ಅಪಘಾತ ನಡೆದಾಗ ಆ ಭಾಗದಲ್ಲಿ ಮಳೆ ಸುರಿಯುತ್ತಿತ್ತು’ ಎಂದು ಪೊಲೀಸರು ತಿಳಿಸಿದ್ದಾರೆ. ಕೆ.ಆರ್. ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

By dtv

Leave a Reply

Your email address will not be published. Required fields are marked *

error: Content is protected !!