dtvkannada

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಕ್ಕಳನ್ನ ಮಾರಾಟ ಮಾಡುತ್ತಿದ್ದ ಗ್ಯಾಂಗನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಬಡವರಿಂದ ಕಡಿಮೆ ಹಣಕ್ಕೆ ಮಕ್ಕಳನ್ನು ಖರೀದಿಸಿ ಮಾರಾಟ ಮಾಡುತ್ತಿದ್ದರು ಎಂಬ ಮಾಹಿತಿ ತಿಳಿದುಬಂದಿದೆ. ಮಕ್ಕಳಿಲ್ಲದ ಪೋಷಕರನ್ನು ಟಾರ್ಗೆಟ್ ಮಾಡಿಕೊಂಡು ಆರೋಪಿಗಳು ಈ ದಂಧೆಗೆ ಇಳಿದಿದ್ದಾರೆ. 2ರಿಂದ 3 ಲಕ್ಷ ರೂ.ಗೆ ಮಕ್ಕಳನ್ನು ಮಾರುತ್ತಿದ್ದ ಗ್ಯಾಂಗನ್ನು ಸದ್ಯ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಬೆಂಗಳೂರು ದಕ್ಷಿಣ ಪೊಲೀಸರ ಬಹು ದೊಡ್ಡ ಕಾರ್ಯಾಚರಣೆಯಲ್ಲಿ ಸುಮಾರು 13 ಮಕ್ಕಳನ್ನು ರಕ್ಷಿಸಲಾಗಿದೆ. ಬಾಡಿಗೆ ತಾಯಿ ಮೂಲಕ ಮಕ್ಕಳು ಕೊಡುತ್ತೀವಿ ಅಂತ ಲಕ್ಷ ಲಕ್ಷ ಹಣ ವಸೂಲಿ ಮಾಡಿ ವಂಚನೆ ಮಾಡುತ್ತಿದ್ದರು. ಬಡ ಕುಟಂಬದ ಮಕ್ಕಳನ್ನ ಕಡಿಮೆ ಹಣಕ್ಕೆ ಖರೀದಿಸಿ ಮಾರಾಟ ಮಾಡುತ್ತಿದ್ದರು. ಬಾಡಿಗೆ ತಾಯಿ ಮೂಲಕ ಮಗು ಆಗಿದೆ ಎಂದು ನಂಬಿಸಿ ವಂಚಿಸುತ್ತಿದ್ದರು. ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಯವರಿಗೆ ಈ ತಂಡ ವಂಚಿಸುತ್ತಿತ್ತು.

ದೇವಿಷಣ್ಮುಗಮ್ಮ, ಮಹೇಶ್ ಕುಮಾರ್, ಜನಾರ್ಧನ್, ರಂಜನಾ ದೇವಿಪ್ರಸಾದ್, ಧನಲಕ್ಷ್ಮೀ ಬಂಧಿತ ಆರೋಪಿಗಳು. ಡಿಸಿಪಿ ಹರೀಶ್ ಪಾಂಡೆ ನೇತೃತ್ವದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳನ್ನು ಬಂಧಿಸಿ, ಪೊಲೀಸರು ಸುಮಾರು 13 ಮಕ್ಕಳನ್ನು ರಕ್ಷಿಸಿದ್ದಾರೆ. ಬಸವನಗುಡಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ 11 ಮಕ್ಕಳನ್ನು ಮಾರಾಟ ಮಾಡಿರುವುದು ಬೆಳಕಿಗೆ ಬಂದಿದ್ದು, ಇನ್ನೂ 18 ಮಕ್ಕಳನ್ನು ಮಾರಾಟ ಮಾಡಿರುವ ಶಂಕೆ ವ್ಯಕ್ತವಾಗಿದೆ.

By dtv

Leave a Reply

Your email address will not be published. Required fields are marked *

error: Content is protected !!