dtvkannada

'; } else { echo "Sorry! You are Blocked from seeing the Ads"; } ?>

ಮಂಗಳೂರು: ಸುರತ್ಕಲ್ ನಲ್ಲಿ ಭಾನುವಾರ ಭಜರಂಗದಳ ಹಮ್ಮಿಕೊಂಡಿದ್ದ ಲವ್ ಜಿಹಾದ್- ಮತಾಂತರದ ಪಿಡುಗಿನ ವಿರುದ್ದ ಜಾಗೃತಿ ಸಭೆಯಲ್ಲಿ ಮಾತನಾಡಿದ ಹಿಂದೂ ಪರ ಹೋರಾಟಗಾರ್ತಿ ಚೈತ್ರಾ ಕುಂದಾಪುರ ಮತ್ತು ಸಂಘಟಕರಾದ ಬಜರಂಗದಳ ವಿರುದ್ದ ಬೊಂಡಾಲ ಚಿತ್ತರಂಜನ್ ಶೆಟ್ಟಿ ಅವರು ಸುರತ್ಕಲ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಚೈತ್ರ ಕುಂದಾಪುರ ಅವರು ಅತ್ಯಂತ ಕೆಟ್ಟ, ಸಾಮಾಜಿಕ ಸ್ವಾಸ್ಥ್ಯ ಕದಡುವ ದ್ವೇಷಪೂರಿತ ಮತ್ತು ಕರಾವಳಿಯ ಕೋಮುಭಾವನೆಗಳನ್ನು ಕೆರಳಿಸುವ ಭಾಷಣ ಮಾಡಿದ್ದು ಆಕೆ ಮತ್ತು ಸಂಘಟಕರ ಕಾನೂನು ಕ್ರಮ ಜರುಗಿಸಬೇಕೆಂದು ಬೊಂಡಾಲ ಚಿತ್ತರಂಜನ್ ಶೆಟ್ಟಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

'; } else { echo "Sorry! You are Blocked from seeing the Ads"; } ?>

ಆಕೆಯ ಭಾಷಣದಲ್ಲಿ ಒಂದು ಕೋಮಿನ ಜನರನ್ನು ಕಾನೂನುಬಾಹಿರ ಪದಗಳನ್ನು ಬಳಸಿ ಅವಮಾನಿಸಿರುವುದಲ್ಲದೆ ಆ ಕೋಮಿನ ವಿರುದ್ಧ ಜನತೆಯನ್ನು ಎತ್ತಿಕಟ್ಟುವ, ದ್ವೇಷ ಹುಟ್ಟಿಸುವ ರೀತಿಯಲ್ಲಿ ಉದ್ರೇಕಕಾರಿಯಾಗಿ ಪದಗಳನ್ನು ಬಳಸಿದ್ದಾರೆ.ಈಕೆಯ ಭಾಷಣದಿಂದ ಪ್ರಚೋದನೆಗೊಳಗಾಗಿ ಕ್ರಿಯೆ ಪ್ರಕ್ರಿಯೆಗಳು ಉಂಟಾಗುವ, ಕೋಮು ಘರ್ಷಣೆಯ ಭೀತಿ ಎದುರಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಪರಸರ ವಾದಗಳು ನಡೆಯುತ್ತಿವೆ.

ಹಾಗೆಯೇ ಈಕೆಯ ಭಾಷಣದಲ್ಲಿ ತುಳುನಾಡಿನ ಕಾರಣಿಕ ಪುರುಷರು, ಆರಾಧ್ಯ ದೈವಗಳಾದ ಕೋಟಿ ಚೆನ್ನಯರನ್ನು ದುರುಪಯೋಗಪಡಿಸಿ, ತುಳುವರ ಧಾರ್ಮಿಕ ನಂಬಿಕೆಗೆ ಘಾಸಿಯುಂಟು ಮಾಡಿದ್ದಾಳೆ. ಕೋಟಿ ಇದು ಅತ್ಯಂತ ಚೆನ್ನಯರು ಹಿಡಿಯುವ ಸುರಿಯ ಎಂಬ ಪವಿತ್ರ ಆಯುಧವನ್ನು ರೌಡಿಗಳು, ಕೋಮು ಘರ್ಷಣೆಯಲ್ಲಿ ಮುಂಡರು ಬಳಸುವ ತಲವಾರಿಗೆ ಹೋಲಿಸಿರುವುದು ಈಕೆಯ ಭಾಷಣದಲ್ಲಿ ತಾವು ಗಮನಿಸಬಹುದು.ಆಘಾತಕಾರಿ, ಧಾರ್ಮಿಕ ನಂಬಿಕೆಗೆ ಘಾಸಿಯುಂಟು ಮಾಡುವ ಪ್ರಯತ್ನ ಇದಾಗಿದೆ ಜೊತೆಗೆ ಸದ್ರಿ ಇದೇ ಭಾಷಣದಲ್ಲಿ ಬಂಟ ಸಮುದಾಯಕ್ಕೆ ಸೇರಿದ ಕಾಂಗ್ರೆಸ್ ಪಕ್ಷದ ಮಾಜಿ ಸಚಿವರೊಬ್ಬರ ಮಗಳಿಗೆ ಮುಸ್ಲಿಮ್ ಯುವಕನೊಂದಿಗೆ ಪ್ರೇಮ ಸಂಬಂಧವಿದೆ,ಆತನೊಂದಿಗೆ ಮದುವೆಗೆ ಹಠ ಹಿಡಿದಿದ್ದಾಳೆ ಎಂದು ಹೇಳಿರುವುದು ವರದಿಯಾಗಿದೆ.

'; } else { echo "Sorry! You are Blocked from seeing the Ads"; } ?>

ಇದು ರಾಜಕೀಯ ಪಕ್ಷಗಳ ಕಾರ್ಯಕರ್ತರ ನಡುವೆ ಸಂಘರ್ಷ ಉಂಟಾಗುವ ಸನ್ನಿವೇಶಕ್ಕೆ ಎಡೆಮಾಡಿಕೊಡಬಹುದು,ಈ ವಿಷಯದ ಸಾಮಾಜಿಕ, ರಾಜಕೀಯ ಗಂಭೀರತೆಯನ್ನು ಮನಗಂಡು ತಾವು ಭಾಷಣಕಾರ್ತಿ ಚೈತ್ರ ಹಾಗೂ ಕಾರ್ಯಕ್ರಮ ಸಂಯೋಜಕರನ್ನು ಬಂಧಿಸಿ ಸರಿಯಾದ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಈ ಮೂಲಕ ವಿನಂತಿಸುತ್ತಿದ್ದೇನೆ ಎಂದು ದೂರುದಾರರಾದ ಬೊಂಡಾಲ ಚಿತ್ತರಂಜನ್ ಶೆಟ್ಟಿ ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!