dtvkannada

ಮೈಸೂರು:ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಗುರುವಾರ ಮೈಸೂರಿಗೆ ಭೇಟಿ ನೀಡಿದರು.

ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟಕ್ಕೆ ಭೇಟಿ ನೀಡಿ ನಂತರ ಚಾಮರಾಜನಗರದ ವೈದ್ಯಕೀಯ ವಿಜ್ಞಾನ ಸಂಸ್ಥೆಯ 450 ಹಾಸಿಗೆಗಳ ಬೋಧನಾ ಆಸ್ಪತ್ರೆಯ ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸಲೆಂದು ಬೆಂಗಳೂರಿನಿಂದ ನೇರವಾಗಿ ವಿಶೇಷ ವಿಮಾನದಲ್ಲಿ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಷ್ಟ್ರಪತಿಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಹಕಾರ ಹಾಗೂ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರುಗಳು ಹೂ ಗುಚ್ಚ ನೀಡುವ ಮೂಲಕ ಸ್ವಾಗತಿಸಿ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಉಪಸ್ಥಿತರಿದ್ದರು. ಕೆಲಕಾಲದ ಬಳಿಕ ರಾಷ್ಟ್ರಪತಿಗಳು ಬಿಗಿ ಭದ್ರತೆಯಲ್ಲಿ ವಾಹನದಲ್ಲಿ ಮೈಸೂರಿನಿಂದ ಬಿಳಿಗಿರಂಗನಬೆಟ್ಟಕ್ಕೆ ತೆರಳಿದರು.

By dtv

Leave a Reply

Your email address will not be published. Required fields are marked *

error: Content is protected !!