dtvkannada

'; } else { echo "Sorry! You are Blocked from seeing the Ads"; } ?>

ತಿರುವನಂತಪುರ: ಕೊರೊನಾ ನಡುವೆ ಶಬರಿಮಲೆಯ ಅಯ್ಯಪ್ಪ ಸನ್ನಿಧಿಯಲ್ಲಿ ನಡೆಯುವ ಈ ಬಾರಿಯ ಮಂಡಲ ಮಕರವಿಳಕ್ಕು ಉತ್ಸವಕ್ಕೆ ಪ್ರತಿದಿನ ಕೇವಲ 25 ಸಾವಿರ ಭಕ್ತರು ದರ್ಶನ ಪಡೆಯಲು ಅವಕಾಶ ನೀಡಲಾಗಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸ್ಪಷ್ಟಪಡಿಸಿದ್ದಾರೆ.

ಶಬರಿಮಲೆ ಅಯ್ಯಪ್ಪ ಭಕ್ತರ ದರ್ಶನಕ್ಕೆ ಅವಕಾಶ ಕೊಡುವ ಬಗ್ಗೆ ಕೇರಳ ಸರ್ಕಾರದ ಉತ್ನತ ಮಟ್ಟದ ಸಭೆಯ ಬಳಿಕ ಪಿಣರಾಯಿ ವಿಜಯನ್ ನಿರ್ಧಾರ ಪ್ರಕಟಿಸಿದ್ದು, ಸದ್ಯದ ಮಟ್ಟಿಗೆ 25 ಸಾವಿರ ಮಂದಿಗೆ ಒಂದು ದಿನದಲ್ಲಿ ಅವಕಾಶ ನೀಡುವ ಬಗ್ಗೆ ಚರ್ಚೆ ನಡೆಸಿದ್ದೇವೆ. ಹೆಚ್ಚಿನ ಭಕ್ತರಿಗೆ ಅವಕಾಶ ನೀಡುವ ಬಗ್ಗೆ ಮುಂದಿನ ದಿನಗಳಲ್ಲಿ ಚಿಂತಿಸಲಾಗುವುದು ಎಂದು ತಿಳಿಸಿದ್ದಾರೆ. ಈ ಬಾರಿ ಅಯ್ಯಪ್ಪ ದರ್ಶನಕ್ಕೆ ತೆರಳುವ ಭಕ್ತರಿಗೆ ಕೆಲವು ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗಿದೆ.

'; } else { echo "Sorry! You are Blocked from seeing the Ads"; } ?>
INDIA – JULY 03: Devotees thronging the temple, Lord Ayyappa of Sabarimala in Kerala, India (Photo by Shankar/The India Today Group/Getty Images)

10 ವರ್ಷಕ್ಕಿಂತ ಕಡಿಮೆ ಮತ್ತು 65 ವರ್ಷಕ್ಕಿಂತ ಮೇಲ್ಪಟ್ಟ ಭಕ್ತರಿಗೆ ಅವಕಾಶ ನೀಡಲಾಗಿದೆ. ಭಕ್ತರು ಆನ್‍ಲೈನ್ ‘ವರ್ಚುವಲ್ ಕ್ಯೂ’ ವ್ಯವಸ್ಥೆಯ ಮೂಲಕ ಮುಂಗಡವಾಗಿ ಕಾಯ್ದಿರಿಸಿ ಭಕ್ತರಿಗೆ ಪ್ರತಿದಿನ ದರ್ಶನಕ್ಕೆ ಅವಕಾಶ ನೀಡಲಾಗಿದೆ. ದೇವಸ್ಥಾನಕ್ಕೆ ಆಗಮಿಸುವ ಭಕ್ತರು ಕೋವಿಡ್-19 ಲಸಿಕೆ ಪಡೆದುಕೊಂಡಿರುವ ಅಥವಾ ಆರ್​ಟಿಪಿಸಿಆರ್ ನೆಗೆಟಿವ್ ರಿಪೋರ್ಟ್ ಕಡ್ಡಾಯವಾಗಿ ಹೊಂದಿರಬೇಕು. ಈ ಬಾರಿ ಭಕ್ತರು ಏರುಮಲೆ ಮತ್ತು ಪುಲ್ಮೇಡು ಸಾಂಪ್ರದಾಯಿಕ ಅರಣ್ಯ ಮಾರ್ಗಗಳ ಮೂಲಕ ಹೋಗಲು ಅನುಮತಿ ನಿರಾಕರಿಸಲಾಗಿದೆ. ಪಂಪಾ ನದಿಯಲ್ಲಿ ಸ್ನಾನ ಮಾಡಲು ಭಕ್ತರಿಗೆ ಅವಕಾಶವಿದ್ದು, ಕೋವಿಡ್-19 ನಿರ್ಬಂಧಗಳಿಂದಾಗಿ ಶಬರಿಮಲೆಯ ಸನ್ನಿಧಾನದಲ್ಲಿ ಯಾತ್ರಾರ್ಥಿಗಳಿಗೆ ಉಳಿಯಲು ಅವಕಾಶವಿಲ್ಲ ಎಂದು ಕೇರಳ ಸರ್ಕಾರ ತಿಳಿಸಿದೆ.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!