';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಮಂಗಳೂರು: ಸುರತ್ಕಲ್‌ನಲ್ಲಿ ಕೋಮು ಪ್ರಚೋದನಕಾರಿ ಭಾಷಣ ಮಾಡಿದ ಚೈತ್ರಾ ಕುಂದಾಪುರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಕಳೆದ ಆದಿತ್ಯವಾರ ಸುರತ್ಕಲ್‌ನಲ್ಲಿ ಭಜರಂಗದಳ ಹಾಗೂ ದುರ್ಗಾವಾಹಿನಿ ಹಮ್ಮಿಕೊಂಡಿದ್ದ ಲವ್ ಜಿಹಾದ್- ಮತಾಂತರದ ಪಿಡುಗಿನ ವಿರುದ್ದ ಜಾಗೃತಿ ಸಭೆಯಲ್ಲಿ ಕೋಮು ಪ್ರಚೋದನೆ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಬೊಂಡಾಲ ಚಿತ್ತರಂಜನ್ ಶೆಟ್ಟಿ ಅವರು ಸುರತ್ಕಲ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಹಾಗೂ ವಿಮೆನ್ ಇಂಡಿಯಾ ಮೂವ್ಮೆಂಟ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿತ್ತು. ಜೊತೆಗೆ ಅಬ್ದುಲ್ ಖಾದರ್ ಎಂಬುವವರೂ ಸಹ ಸುರತ್ಕಲ್ ಠಾಣೆಗೆ ದೂರು ನೀಡಿದ್ದರು.ಇದೀಗ ದ್ವೇಷ, ಸುಳ್ಳು, ಅಸಭ್ಯ ಭಾಷಣದ ಕುರಿತು ಚೈತ್ರಾ ಕುಂದಾಪುರ ಮೇಲೆ 153ಎ, 505(2) ಅಡಿ ಸುರತ್ಕಲ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.