ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ಪದಾಧಿಕಾರಿಗಳ ಆಯ್ಕೆ ಪಟ್ಟಿಯನ್ನು ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀರಕ್ಷಾ ರಾಮಯ್ಯರು ಅಂತಿಮ ಪಡಿಸಿದ್ದು. ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಹನೀಫ್ ಪುಣ್ಚತ್ತಾರ್ ಆಯ್ಕೆಯಾಗಿದ್ದಾರೆ.
ಇವರನ್ನು ನರಿಮೊಗರು ವಲಯ ಉಸ್ತುವಾರಿಯಾಗಿ ಕೂಡಾ ಜವಾಬ್ದಾರಿ ನೀಡಲಾಗಿದೆ. ಪಕ್ಷದ ನಿಷ್ಠಾವಂತ ಕಾರಯಕರ್ತರಾಗಿರುವ ಇವರು ಪುತ್ತೂರು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ, ಚುನಾವಣಾ ಉಸ್ತುವಾರಿಯಾಗಿ ಕೆಲಸ ಮಾಡಿದ್ದಾರೆ.