';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ದುಬೈ: ಶ್ರೀಕರ್ ಭರತ್ (78) ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್ (51) ಬಿರುಸಿನ ಅರ್ಧಶತಕದ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಶುಕ್ರವಾರ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ ಏಳು ವಿಕೆಟ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. ಕೊನೆಯ ಎಸೆತದಲ್ಲಿ ಸಿಕ್ಸರ್ ಬಾರಿಸಿದ ಭರತ್ ನೈಜ ಹೀರೊ ಎನಿಸಿದರು.
ಅಂತಿಮ ಎಸೆತದಲ್ಲಿ ಸಿಕ್ಸರ್ ಬಾರಿಸಿದ ಶ್ರೀಕರ್ ಭರತ್ ಗೆಲುವಿನ ರೂವಾರಿ ಎನಿಸಿದರು. 51 ಎಸೆತಗಳನ್ನು ಎದುರಿಸಿದ ಭರತ್ ಮೂರು ಬೌಂಡರಿ ಹಾಗೂ ನಾಲ್ಕು ಸಿಕ್ಸರ್ ನೆರವಿನಿಂದ 78 ರನ್ ಗಳಿಸಿ ಅಜೇಯರಾಗುಳಿದರು.
ಅವರಿಗೆ ತಕ್ಕ ಸಾಥ್ ನೀಡಿದ ಮ್ಯಾಕ್ಸ್‌ವೆಲ್ ಕೇವಲ 33 ಎಸೆತಗಳಲ್ಲಿ ಎಂಟು ಬೌಂಡರಿ ನೆರವಿನಿಂದ 51 ರನ್ ಗಳಿಸಿ ಔಟಾಗದೆ ಉಳಿದರು.