';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಬಂಟ್ವಾಳ: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ, ನಿಗೂಡ ಸ್ಥಳಕ್ಕೆ ಕರೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ನಡೆಸಿದ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಅಮ್ಟಾಡಿಯಲ್ಲಿ ನಡೆದಿದೆ.
ಪ್ರಕರಣದ ಕುರಿತು ಹಲವು ಸಂಶಯಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಬಂಟ್ವಾಳ ಪೊಲೀಸರು ಗಂಭೀರ ಪರಿಗಣಿಸಿದ್ದು, ಗ್ಯಾಂಗ್ ರೇಪ್ ಪ್ರಕರಣ ದಾಖಲಾಗುವ ಸಾಧ್ಯತೆಯ ಕುರಿತು ಮೂಲಗಳು ತಿಳಿಸಿದೆ.
ಆರೋಪಿಗಳು ಬಾಲಕಿಯನ್ನು ಯಾವುದೋ ನಿಗೂಢ ತಾಣಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ನಡೆಸಿದ್ದಾರೆ ಎನ್ನಲಾಗಿದೆ.
ಬಾಲಕಿಯ ಹೇಳಿಕೆಯ ಆಧಾರದಲ್ಲಿ ಪೊಲೀಸರಿಗೆ ಆರೋಪಿಗಳ ಸುಳಿವು ಲಭ್ಯವಾಗಿದ್ದು, ಶೀಘ್ರ ಬಂಧಿಸುವ ಸಾಧ್ಯತೆ ಇದೆ. ಯಾವುದೋ ನಿಗೂಢ ತಾಣಕ್ಕೆ ಕರೆದುಕೊಂಡು ಹೋಗಿದ್ದ ಆರೋಪಿಗಳು ಬ್ರಹ್ಮರಕೂಟ್ಲು ಬಳಿ ಬಿಟ್ಟು ಹೋಗಿರುವುದು ಸಿಸಿ ಕ್ಯಾಮರದಲ್ಲಿ ದಾಖಲಾಗಿದೆ.
ಸಂತ್ರಸ್ತೆ ಬಾಲಕಿಯನ್ನು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗಿದೆ.