dtvkannada

ಮೈಸೂರು: ಕೆಎಸ್ಆರ್​ಟಿಸಿ ಬಸ್ ಹಾಗೂ ಆಟೋ ಮುಖಾಮುಖಿ ಡಿಕ್ಕಿ ಹೊಡೆದು ಮದುಮಗ ಸೇರಿದಂತೆ ಮೂವರು ಸ್ಥಳದಲ್ಲೇ ದುರ್ಮರಣಕ್ಕೀಡಾದ ಘಟನೆ ಮೈಸೂರು-ಟಿ.ನರಸೀಪುರ ಹೆದ್ದಾರಿಯಲ್ಲಿ ಸಂಭವಿಸಿದೆ. ಭೀಕರ ಅಪಘಾತದಲ್ಲಿ ಇಮ್ರಾನ್ ಪಾಷಾ(30), ಯಾಸ್ಮಿನ್(28), ಎರಡು ವರ್ಷದ ಬಾಲಕ ಅಫ್ನಾನ್ ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ.

ಇಬ್ಬರ ಸ್ಥಿತಿ ಗಂಭೀರವಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಕ್ಟೋಬರ್ 24ರಂದು ಇಮ್ರಾನ್ ಪಾಷಾಗೆ ಮದುವೆ ನಿಶ್ಚಯವಾಗಿತ್ತು. ಮದುವೆ ಬಟ್ಟೆ ಖರೀದಿಗೆ ಕುಟುಂಬ ಸಮೇತ ಮೈಸೂರಿಗೆ ಬರುತ್ತಿದ್ದರು. ವರಕೋಡು ಸಮೀಪದ ಹಾಸ್ಟೆಲ್ ಬಳಿ ತಿರುವಿನಲ್ಲಿ ಬಸ್ ಡಿಕ್ಕಿಯಾದ ರಭಸಕ್ಕೆ ಆಟೋ ಸಂಪೂರ್ಣ ಜಖಂಗೊಂಡಿದೆ. ವರುಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ದುರ್ಘಟನೆ ನಡೆದಿದೆ.

By dtv

Leave a Reply

Your email address will not be published. Required fields are marked *

error: Content is protected !!