dtvkannada

ಧಾರವಾಡ: ಮತಾಂತರಕ್ಕೆ ಯತ್ನಿಸಲಾಗುತ್ತಿದೆ ಎಂದು ಆರೋಪಿಸಿ ಧಾರವಾಡ ಜಿಲ್ಲೆ ಅಳ್ನಾವರದಲ್ಲಿ ಪ್ರಾರ್ಥನೆ ನಡೆಯುತ್ತಿದ್ದ ಮನೆ ಮೇಲೆ ದಾಳಿ ನಡೆಸಲಾಗಿದೆ. ದಯಾಸಾಗರ ಎಂಬುವವರ ಮನೆ ಮೇಲೆ ಭಜರಂಗದಳದ ಕಾರ್ಯಕರ್ತರು ದಾಳಿ ಮಾಡಿದ್ದಾರೆ. ಅಷ್ಟೇ ಅಲ್ಲದೆ ಮನೆಯಲ್ಲಿ ಪ್ರಾರ್ಥನೆ ಮಾಡುತ್ತಿದ್ದವರನ್ನು ಕಾರ್ಯಕರ್ತರು ಹೊರಕಳಿಸಿದ್ದಾರೆ.

ಅಳ್ನಾವರ ಮತ್ತು ಸುತ್ತಮುತ್ತಲಿನ ಗ್ರಾಮಗಳ‌ ಹಿಂದೂಗಳು ಪ್ರಾರ್ಥನೆಯಲ್ಲಿ ಭಾಗಿಯಾಗಿದ್ದಾರೆ. ಹಿಂದೂಗಳನ್ನು ಸೇರಿಸಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಿಸುತ್ತಿದ್ದರು ಎಂದು ಆರೋಪ ಮಾಡಲಾಗಿದೆ. ಇತ್ತೀಚೆಗೆ ಮತಾಂತರಗೊಂಡಿರುವ ಕೆಲವರಿಂದ ಪ್ರಾರ್ಥನೆ ನಡೆಯುತ್ತಿದೆ ಎಂದು ಆರೋಪಿಸಲಾಗಿದೆ. ಅಳ್ನಾವರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

By dtv

Leave a Reply

Your email address will not be published. Required fields are marked *

error: Content is protected !!