dtvkannada

'; } else { echo "Sorry! You are Blocked from seeing the Ads"; } ?>

ಶಾರ್ಜಾ: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆದ ಎರಡನೇ ಕ್ವಾಲಿಫೈಯರ್ ಹಣಾಹಣಿಯಲ್ಲಿ ಮೂರು ವಿಕೆಟ್ ಅಂತರದ ಗೆಲುವು ದಾಖಲಿಸಿರುವ ಕೋಲ್ಕತ್ತ ನೈಟ್ ರೈಡರ್ಸ್ ಫೈನಲ್‌ಗೆ ಲಗ್ಗೆಯಿಟ್ಟಿದೆ. ಅಂತಿಮ ಹಂತದಲ್ಲಿ ಹಲವಾರು ನಾಟಕೀಯ ತಿರುವುಗಳನ್ನು ಪಡೆದ ಪಂದ್ಯದಲ್ಲಿ ಕೊನೆಗೂ ಇನ್ನು ಒಂದು ಎಸೆತ ಬಾಕಿ ಉಳಿದಿರುವಂತೆಯೇ ಗೆಲುವು ದಾಖಲಿಸಿರುವ ಕೋಲ್ಕತ್ತ, ರೋಚಕ ಗೆಲುವು ದಾಖಲಿಸಿದೆ.

ಇದೀಗ ಅಕ್ಟೋಬರ್ 15 ಶುಕ್ರವಾರ ನಡೆಯಲಿರುವ ಫೈನಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸವಾಲನ್ನು ಎದುರಿಸಲಿದೆ. ಭಾನುವಾರ ನಡೆದ ಮೊದಲ ಕ್ವಾಲಿಫೈಯರ್‌ನಲ್ಲಿ ಡೆಲ್ಲಿ ತಂಡವನ್ನು ಮಣಿಸಿದ್ದ ಸಿಎಸ್‌ಕೆ ಫೈನಲ್‌ಗೆ ಪ್ರವೇಶಿಸಿತ್ತು. ಅತ್ತ ಏಯಾನ್ ಮಾರ್ಗನ್ ಪಡೆಯು ಎಲಿಮಿನೇಟರ್‌‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಗೆಲುವು ದಾಖಲಿಸಿತ್ತು. ಈಗ ಎರಡನೇ ಕ್ವಾಲಿಫೈಯರ್‌ನಲ್ಲಿ ಗುಂಪಿನ ಅಗ್ರಸ್ಥಾನಿ ಡೆಲ್ಲಿ ತಂಡಕ್ಕೆ ಸೋಲಿನ ರುಚಿ ತೋರಿಸಿದೆ. ಇದರೊಂದಿಗೆ ಡೆಲ್ಲಿ ತಂಡದ ಚೊಚ್ಚಲ ಐಪಿಎಲ್ ಕನಸು ಭಗ್ನಗೊಂಡಿದೆ.

'; } else { echo "Sorry! You are Blocked from seeing the Ads"; } ?>

ವರುಣ್ ಚಕ್ರವರ್ತಿ (26ಕ್ಕೆ 2 ವಿಕೆಟ್) ಸೇರಿದಂತೆ ಕೆಕೆಆರ್ ಬೌಲರ್‌ಗಳ ಪ್ರಭಾವಿ ದಾಳಿಗೆ ಸಿಲುಕಿದ ಡೆಲ್ಲಿ ತಂಡವು ಐದು ವಿಕೆಟ್ ನಷ್ಟಕ್ಕೆ 135 ರನ್ ಗಳಿಸಲಷ್ಟೇ ಸಾಧ್ಯವಾಯಿತು. ನಿಧಾನಗತಿಯ ಆಟವಾಡಿದ ಡೆಲ್ಲಿ ಬ್ಯಾಟರ್‌ಗಳು ತಮ್ಮದೇ ತಪ್ಪಿಗಾಗಿ ದೊಡ್ಡ ಬೆಲೆ ತೆರಬೇಕಾಯಿತು. 

ಬಳಿಕ ಗುರಿ ಬೆನ್ನತ್ತಿದ ಕೋಲ್ಕತ್ತ ತಂಡಕ್ಕೆ ವೆಂಕಟೇಶ್ ಅಯ್ಯರ್ ಹಾಗೂ ಶುಭಮನ್ ಗಿಲ್ ಮೊದಲ ವಿಕೆಟ್‌ಗೆ 96 ರನ್‌ಗಳ ಜೊತೆಯಾಟ ಕಟ್ಟುವ ಮೂಲಕ ತಂಡವನ್ನು ಗೆಲುವಿನತ್ತ ಮುನ್ನಡೆಸಿದರು. ಆದರೆ ಕೊನೆಯ ಹಂತದಲ್ಲಿ ಕುಸಿತ ಕಂಡು ಸೋಲಿನ ಭೀತಿಗೊಳಗಾಗಿತ್ತು. ಆದರೆ ಅಂತಿಮ ಓವರ್‌ನಲ್ಲಿ ಸಿಕ್ಸರ್ ಬಾರಿಸಿದ ರಾಹುಲ್ ತ್ರಿಪಾಠಿ ರೋಚಕ ಗೆಲುವು ಒದಗಿಸಿಕೊಡುವಲ್ಲಿ ನೆರವಾದರು.

'; } else { echo "Sorry! You are Blocked from seeing the Ads"; } ?>

View this post on Instagram

A post shared by Kolkata Knight Riders (@kkriders)

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!