';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ವಿಜಯಪುರ: ಆಟವಾಡಲು ಹೋಗಿದ್ದ ಬಾಲಕಿ ಮೇಲೆ ವೃದ್ಧನಿಂದ ಅತ್ಯಾಚಾರ ನಡೆದಿರುವ ಘಟನೆ ವಿಜಯಪುರದ ಗಾಂಧಿಚೌಕ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಾಲಕಿಗೆ ರಕ್ತಸ್ರಾವವಾದ ಬಳಿಕ ಘಟನೆ ಬೆಳಕಿಗೆ ಬಂದಿದ್ದು 60 ವರ್ಷದ ವೃದ್ಧನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಆಟವಾಡಲು ಮನೆಗೆ ಬರುತ್ತಿದ್ದ ಒಂಬತ್ತು ವರ್ಷದ ಬಾಲಕಿ ಮೇಲೆ 60 ವರ್ಷದ ವೃದ್ಧ ಅತ್ಯಾಚಾರ ಎಸಗಿದ್ದಾನೆ. ಬಾಲಕಿಗೆ ತೀವ್ರ ರಕ್ತಸ್ರಾವವಾದ ವೇಳೆ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ. ಸದ್ಯ ರಕ್ತಸ್ರಾವದಿಂದ ಬಳಲುತ್ತಿರುವ ಬಾಲಕಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬಾಲಕಿ ಹೇಳಿಕೆ ಆಧರಿಸಿ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ.
ಘಟನೆ ಸಂಬಂಧ ವಿಜಯಪುರ ಮಹಿಳಾ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು ಆರೋಪಿ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.