ಹುಬ್ಬಳ್ಳಿ: ಕನ್ನಡದ ಹಿರಿಯ ನಟ ಪ್ರೊ.ಜಿ.ಕೆ ಗೋವಿಂದ ರಾವ್ ಇಂದು ಮುಂಜಾನೆ ನಿಧನರಾಗಿದ್ದಾರೆ.
ವೃತ್ತಿಯಿಂದ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದ ಅವರು, ಕಲಾವಿದರಾಗಿಯೂ ಗುರುತಿಸಿಕೊಂಡಿದ್ದರು. ಮಾಲ್ಗುಡಿ ಡೇಸ್, ಮಹಾಪರ್ವ ಧಾರಾವಾಹಿ ಸೇರಿದಂತೆ ಹಲವಾರು ಧಾರವಾಹಿಗಳಲ್ಲಿ, ಚಲನಚಿತ್ರಗಳಲ್ಲಿ ಅವರು ಅಭಿನಯಿಸಿದ್ದರು. ಅವರಿಗೆ 84 ವರ್ಷ ವಯಸ್ಸಾಗಿತ್ತು. ಲೇಖಕರಾಗಿ, ಪ್ರಾಧ್ಯಾಪಕರಾಗಿ, ರಂಗಭೂಮಿ ಕಲಾವಿದರಾಗಿ, ಚಿತ್ರ ನಟರಾಗಿ ಅವರು ಗುರುತಿಸಿಕೊಂಡಿದ್ದರು.
ಸಾಹಿತ್ಯ:ಇಂಗ್ಲಿಷ್ ಸಾಹಿತ್ಯದ ಅಧ್ಯಯನ ನಡೆಸಿದ ಅವರು ಇಂಗ್ಲಿಷ್ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ರಂಗಭೂಮಿ, ಸಿನಿಮಾರಂಗದ ಒಡನಾಟ ಅವರಿಗಿದೆ. ಈಶ್ವರ ಅಲ್ಲಾ (ಕಿರು ಕಾದಂಬರಿ), ಶೇಕ್ಸ್‍ಪಿಯರ್ ಎರಡು ನಾಟಕಗಳ ಅಧ್ಯಯನ, ಶೇಕ್ಸ್‍ಪಿಯರ್ ಸಂವಾದ (ವಿಮರ್ಶಾ ಲೇಖನಗಳು), ನಡೆ-ನುಡಿ, ನಾಗರಿಕತೆ ಮತ್ತು ಅರಾಜಕತೆ, ಬಿಂಬ ಪ್ರತಿಬಿಂಬ, ಕ್ರಿಯೆ ಪ್ರತಿಕ್ರಿಯೆ, ಮನು ವರ್ಸಸ್ ಅಂಬೇಡ್ಕರ್: ತಮ್ಮ ಆಯ್ಕೆ ಯಾವುದು? (ಸಂಕೀರ್ಣ ಬರಹಗಳ ಸಂಗ್ರಹಗಳು) ಸೇರಿದಂತೆ ಹಲವಾರು ಕೃತಿಗಳನ್ನು ರಚಿಸಿದ್ದಾರೆ.
ಹಿರಿಯ ಲೇಖಕ,
ಚಿಂತಕ, ನಟ ಪ್ರೊ.ಜಿ.ಕೆ.ಗೋವಿಂದರಾವ್ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ.
ನನ್ನ ಹಿತೈಷಿ,
ಮಾರ್ಗದರ್ಶಕ ಮತ್ತು
ಆತ್ಮೀಯ ಸ್ನೇಹಿತರಾಗಿದ್ದ ಪ್ರೊ.ಜಿಕೆಜಿ ಅವರಿಗೆ ಗೌರವದ ನಮನಗಳು.
ಅವರನ್ನು ಕಳೆದುಕೊಂಡ ಕುಟುಂಬದ ಸದಸ್ಯರು, ಶಿಷ್ಯರು, ಅಭಿಮಾನಿಗಳ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ. pic.twitter.com/d3RDgJqyll'; } else { echo "Sorry! You are Blocked from seeing the Ads"; } ?>
ವಿಪಕ್ಷ ನಾಯಕ ಸಿದ್ದರಾಮಯ್ಯ ಜಿ.ಕೆ.ಗೋವಿಂದರಾವ್ ನಿಧನದ ಸುದ್ದಿಗೆ ಸಂತಾಪ ಸೂಚಿಸಿದ್ದಾರೆ. ಹಿರಿಯ ಲೇಖಕ, ಚಿಂತಕ, ನಟ ಪ್ರೊ.ಜಿ.ಕೆ.ಗೋವಿಂದರಾವ್ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ನನ್ನ ಹಿತೈಷಿ, ಮಾರ್ಗದರ್ಶಕ ಮತ್ತು ಆತ್ಮೀಯ ಸ್ನೇಹಿತರಾಗಿದ್ದ ಪ್ರೊ.ಜಿಕೆಜಿ ಅವರಿಗೆ ಗೌರವದ ನಮನಗಳು.ಅವರನ್ನು ಕಳೆದುಕೊಂಡ ಕುಟುಂಬದ ಸದಸ್ಯರು, ಶಿಷ್ಯರು, ಅಭಿಮಾನಿಗಳ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದಾರೆ.