dtvkannada

ದುಬೈ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2021ನೇ ಸಾಲಿನ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಶುಕ್ರವಾರ ನಡೆದ ಫೈನಲ್ ಪಂದ್ಯದಲ್ಲಿ ಕೋಲ್ಕತ್ತ ನೈಟ್ ರೈಡರ್ಸ್ ವಿರುದ್ಧ 27 ರನ್ ಅಂತರದ ರೋಚಕ ಗೆಲುವು ದಾಖಲಿಸಿರುವ ಚೆನ್ನೈ ಸೂಪರ್ ಕಿಂಗ್ಸ್ ಟ್ರೋಫಿಗೆ ಮುತ್ತಿಕ್ಕಿದೆ. 

ಈ ಮೂಲಕ ನಾಲ್ಕನೇ ಬಾರಿಗೆ ಪ್ರಶಸ್ತಿ ಗೆದ್ದ ಸಾಧನೆ ಮಾಡಿದೆ. ಅತ್ತ ಕೋಲ್ಕತ್ತ ತಂಡದ ಮೂರನೇ ಐಪಿಎಲ್ ಟ್ರೋಫಿ ಕನಸು ಭಗ್ನಗೊಂಡಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಆಹ್ವಾನಿಸಲ್ಪಟ್ಟ  ಚೆನ್ನೈ ತಂಡವವು ಫಫ್ ಡುಪ್ಲೆಸಿ (86) ಬಿರುಸಿನ ಅರ್ಧಶತಕ ನೆರವಿನಿಂದ ಮೂರು ವಿಕೆಟ್ ನಷ್ಟಕ್ಕೆ 192 ರನ್‌ಗಳ ಬೃಹತ್ ಮೊತ್ತ ಪೇರಿಸಿತ್ತು.  ಋತುರಾಜ್ ಗಾಯಕವಾಡ್ (32), ರಾಬಿನ್ ಉತ್ತಪ್ಪ (31) ಹಾಗೂ ಮೊಯಿನ್ ಅಲಿ (37*) ಜೊತೆಗೆ ತಲಾ ಅರ್ಧಶತಕಗಳ ಜೊತೆಯಾಟ ಕಟ್ಟಿದ ಡುಪ್ಲೆಸಿ 100ನೇ ಐಪಿಎಲ್ ಪಂದ್ಯವನ್ನು ಸ್ಮರಣೀಯವಾಗಿಸಿದರು. 

ಬಳಿಕ ಗುರಿ ಬೆನ್ನತ್ತಿದ ಕೋಲ್ಕತ್ತ, ಆರಂಭಿಕರಾದ ವೆಂಕಟೇಶ್ ಅಯ್ಯರ್ (50) ಹಾಗೂ ಶುಭಮನ್ ಗಿಲ್ (51) ಆಕರ್ಷಕ ಅರ್ಧಶತಕಗಳ ಹೊರತಾಗಿಯೂ ಒಂಬತ್ತು ವಿಕೆಟ್ ನಷ್ಟಕ್ಕೆ 164 ರನ್ ಗಳಿಸಲಷ್ಟೇ ಸಾಧ್ಯವಾಯಿತು. ಈ ಮೂಲಕ ಗಿಲ್-ಅಯ್ಯರ್ ಹೋರಾಟವು ವ್ಯರ್ಥವೆನಿಸಿದೆ.

ಚೆನ್ನೈ ಸೂಪರ್ ಕಿಂಗ್ಸ್ ನಾಲ್ಕನೇ ಬಾರಿ ಚಾಂಪಿಯನ್
ಚೆನ್ನೈ ಸೂಪರ್ ಕಿಂಗ್ಸ್ ನಾಲ್ಕನೇ ಬಾರಿಗೆ ಐಪಿಎಲ್ ಪ್ರಶಸ್ತಿಯನ್ನು ಗೆದ್ದುಕೊಂಡಿತು. 2010, 2011 ರಲ್ಲಿ ಚೆನ್ನೈ ಪ್ರಶಸ್ತಿಯನ್ನು ಗೆದ್ದುಕೊಂಡಿತ್ತು. ಇದರ ನಂತರ, ಚೆನ್ನೈ ಸೂಪರ್ ಕಿಂಗ್ಸ್ 2018 ರಲ್ಲಿ ಚಾಂಪಿಯನ್ ಆಯಿತು. ಈಗ ಮತ್ತೊಮ್ಮೆ ಚೆನ್ನೈ ಚಾಂಪಿಯನ್ ಆಗುವ ಸಾಧನೆಯನ್ನು ಸಾಧಿಸಿದೆ.

By dtv

Leave a Reply

Your email address will not be published. Required fields are marked *

error: Content is protected !!