ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಆಲ್ಟೋ ಕಾರು ಪಲ್ಚಿಯಾಗಿ ಕುಟುಂಬವೊಂದು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾದ ಘಟನೆ ಒಳಮೊಗ್ರು ಗ್ರಾಮದ ಪರ್ಪುಂಜ ಬಳಿ ಇಂದು ಮುಂಜಾನೆ 6:00 ಗಂಟೆಗೆ ನಡೆದಿದೆ.
ಸುಳ್ಯ ಕಡೆಯಿಂದ ಪುತ್ತೂರು ಕಡೆ ಹೊರಟಿದ್ದ ಕಾರು ಪರ್ಪುಂಜ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಕಾರಿನಲ್ಲಿದ್ದ ಪುಟ್ಟ ಮಗು ಸೇರಿ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಅಲ್ಲೇ ಪಕ್ಕದಲ್ಲಿ ವಿದ್ಯುತ್ ಕಂಬ ಇದ್ದು, ಸ್ವಲ್ಪದರಲ್ಲೇ ಭಾರೀ ಅನಾಹುತ ತಪ್ಪಿದೆ.
ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಹೆಚ್ಚಿನ ವಿವರ ತಿಳಿದು ಬಂದಿಲ್ಲ