';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಕೊಡಗು: ಪಂಚಾಯಿತಿ ಸದಸ್ಯೆ ಆತ್ಮಹತ್ಯೆಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕೈಕೇರಿಯಲ್ಲಿ ನಡೆದಿದೆ. ಅರ್ವತೊಕ್ಲು ಗ್ರಾಮ ಪಂಚಾಯತಿ ಸದಸ್ಯೆ ರಮ್ಯಾ ಹೆಚ್ ಎಸ್ (28) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡವರು.
ಆತ್ಮಹತ್ಯೆಗೆ ಸಾಂಸಾರಿಕ ಕಲಹ ಕಾರಣ ಎಂಬ ಶಂಕೆ ವ್ಯಕ್ತವಾಗಿದೆ. ನಾಲ್ಕು ದಿನಗಳ ಹಿಂದೆ ವಿಷ ಸೇವಿಸಿದ್ದ ರಮ್ಯಾ ಹೆಚ್ಚಿನ ಚಿಕಿತ್ಸೆಗೆ ಮೈಸೂರು ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಪಡೆದು ಮನೆಗೆ ಮರಳಿದ್ದ ಗ್ರಾ. ಪಂ. ಸದಸ್ಯೆ ರಮ್ಯಾಗೆ ಇದ್ದಕ್ಕಿದ್ದಂತೆ ಹೊಟ್ಟೆ ನೋವು ಉಲ್ಬಣಿಸಿ ಕೊನೆಯುಸಿರೆಳೆದಿದ್ದಾರೆ. ಗೋಣಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.