ಉಪ್ಪಿನಂಗಡಿ: ಮೀನಿನ ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಉಪ್ಪಿನಂಗಡಿಯ ವಳಾಲ್ ಸಮೀಪದ ಗೋಲಿತೊಟ್ಟು ಎಂಬಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಮಂಗಳೂರು ಸಮೀಪದ ಕುಂಟಲ್ಪಾಡಿ ಪದವು ನಿವಾಸಿ ಸಚಿನ್(29) ಎಂದು ತಿಳಿದು ಬಂದಿದೆ. ಉಪ್ಪಿನಂಗಡಿಯಿಂದ ನೆಲ್ಯಾಡಿ ಹೊರಟಿದ್ದ ಬೈಕ್ ಮತ್ತು ಮಂಗಳೂರಿಗೆ ಬರುತ್ತಿದ್ದ ಮೀನಿನ ಲಾರಿ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಚಾಲಕನ ನಿಯಂತ್ರಣ ತಪ್ಪಿದ ಲಾರಿ ಪಕ್ಕದ ಹೊಂಡಕ್ಕೆ ಹೋಗಿ ಬಿದ್ದಿದೆ.
ಬೈಕ್ ಸವಾರನ ತಲೆಯ ಮೇಲೆ ಲಾರಿ ಹರಿದ ಪರಿಣಾಮ, ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸಹಸವಾರನಿಗೆ ಗಂಭೀರ ಗಾಯಗೊಂಡಿದ್ದು ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ. ಹೆಚ್ಚಿನ ವಿವರ ಇನ್ನಷ್ಟೇ ತಿಳಿಯಬೇಕಿದೆ.