dtvkannada

ವಿಜಯಪುರ: ಕೆಟ್ಟು ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ನಾಲ್ವರು ಮೃತಪಟ್ಟ ಭೀಕರ ಘಟನೆ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಹೊನಗನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಕಾರಿನಲ್ಲಿದ್ದ ವಿಜಯಪುರ ನಗರ ಮೂಲದ ವ್ಯಕ್ತಿ, ಮಹಿಳೆ ಮತ್ತು ಒಂದು ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಲಾರಿ ಚಾಲಕ ಕೂಡ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.

ಲಾರಿ ಕೆಟ್ಟು ನಿಂತಿತ್ತು. ಕೆಟ್ಟು ನಿಂತಿದ್ದ ಲಾರಿ ದುರಸ್ಥಿಯಲ್ಲಿ ಚಾಲಕ ನಿರತನಾಗಿದ್ದ. ಈ ವೇಳೆ ಲಾರಿಗೆ ಕಾರು ಡಿಕ್ಕಿ ಹೊಡೆದಿದೆ. ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಒಂದೇ ಕುಟುಂಬದ ಮೂವರು ಹಾಗೂ ಲಾರಿ ಚಾಲಕ ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಮೃತರ ಹೆಸರು ಇನ್ನೂ ತಿಳಿದು ಬಂದಿಲ್ಲ. ಘಟನೆ ಸಂಬಂಧ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

By dtv

Leave a Reply

Your email address will not be published. Required fields are marked *

error: Content is protected !!