ಸುಳ್ಯ: ಇಮಾಯತುಲ್ ಇಸ್ಲಾಂ ಜುಮಾ ಮಸ್ಜಿದ್ ಗೂನಡ್ಕ ಇದರ ಜಮಹತ್ ಕಮಿಟಿ ವತಿಯಿಂದ ಪ್ರವಾದಿ ಮಹಮ್ಮದ್ ನಬಿ ಸ.ಅ ರವರ ಜನ್ಮದಿನಾಚರಣೆ ಪ್ರಯುಕ್ತ ಮಿಲಾದ್ ಕಾರ್ಯಕ್ರಮ ಹಾಗು ಹಯಾತುಲ್ ಇಸ್ಲಾಂ ಮದ್ರಸ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ವಿದ್ಯಾಭ್ಯಾಸದಲ್ಲಿ ಮೊದಲ ಹಾಗೂ ದ್ವಿತೀಯ ಸ್ಥಾನ ಗಳಿಸಿದ ವಿದ್ಯಾರ್ಥಿಗಳಿಗೆ ವೀ ಆರ್ ಒನ್ ವಾಟ್ಸಪ್ಪ್ ಗ್ರೂಪ್ ವತಿಯಿಂದ ಸುಂದರ ಸ್ಮರಣಿಕೆ ನೀಡಿ ಗೌರವಿಸಲಾಯಿತು.
9 ಗಂಟೆ ಸರಿಯಾಗಿ ಧ್ವಜಾರೋಹಣ ನಡೆಸಿ ನಂತರ ಕಾರ್ಯಕ್ರಮ ಉದ್ಘಾಟನೆಗೊಂಡು ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಮೌಲೂದ್ ಪಾರಾಯಣ ಹಾಗೂ ಪ್ರಶಸ್ತಿ ವಿತರಣ ಕಾರ್ಯಕ್ರಮದೊಂದಿಗೆ ನೆಬಿಯವರ ವಿಚಾರ ಧಾರೆಯನ್ನು ಅನಾವರಣಗೊಳಿಸಲಾಯಿತು. ಜಮಹತ್ ಕಮಿಟಿಯು ಅಚ್ಚುಕಟ್ಟಾಗಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕೊನೆಗೆ ತಬರುಕ್ ವಿತರಣೆಯೊಂದಿಗೆ ಕಾರ್ಯಕ್ರಮವನ್ನು ಸಮಾಪ್ತಿಗೊಳಿಸಲಾಯಿತು