dtvkannada

ತುಮಕೂರು: ಭಜರಂಗದಳ ಜಿಲ್ಲಾ ಸಂಚಾಲಕನ ಮೇಲೆ‌ ಹಲ್ಲೆ ಪ್ರಕರಣ ಹಿನ್ನೆಲೆಯಲ್ಲಿ ಹಿಂದೂಪರ ಸಂಘಟನೆಗಳಿಂದ ತುಮಕೂರು ಬಂದ್​ಗೆ ಕರೆ ನೀಡಲಾಗಿದೆ.

ನಾಳೆ ತುಮಕೂರು ಬಂದ್​​ಗೆ ಕರೆ ನೀಡಲು ಹಿಂದೂಪರ ಸಂಘಟನೆಗಳು ನಿರ್ಧಾರ ಮಾಡಿವೆ. ನಿನ್ನೆ ನಡೆದ ಸಭೆಯಲ್ಲಿ ಬಂದ್​ಗೆ ಕರೆ ನೀಡಲು ನಿರ್ಧಾರ ಮಾಡಲಾಗಿದೆ.

ನಿನ್ನೆ ಮಂಜು ಭಾರ್ಗವ್ ಎಂಬವರ ಮೇಲೆ ಗುಂಪೊಂದು ಹಲ್ಲೆ ನಡೆಸಿತ್ತು. ಈ ಹಲ್ಲೆ ಖಂಡಿಸಿ ಸ್ವಯಂ ಪ್ರೇರಿತ ತುಮಕೂರು ಬಂದ್​ಗೆ ಕರೆ ನೀಡಲಾಗಿದೆ. ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಶ್ರೀನಿವಾಸ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಶುಕ್ರವಾರ ಬೆಳಗ್ಗೆ 6 ರಿಂದ ಸಂಜೆ 6 ಗಂಟೆ ವರೆಗೂ ಬಂದ್ ಮಾಡುವಂತೆ ಕಡೆ ನೀಡಲಾಗಿದೆ. ಟೌನ್ ಹಾಲ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲು ನಿರ್ಧಾರ ಮಾಡಿದ್ದಾರೆ.

ಏನಿದು ಘಟನೆ?
ಮಂಗಳವಾರ ಸಂಜೆ ಬೆಂಗಳೂರು-ಹೊನ್ನಾವರ ರಾಷ್ಟ್ರೀಯ ಹೆದ್ದಾರಿ 206 ರಲ್ಲಿ ಬೈಕ್ ವ್ಹೀಲಿಂಗ್ ನಡೆಸುತ್ತಿದ್ದವರಿಗೆ ಬುದ್ದಿ ಹೇಳಿದ್ದರಿಂದ ಇಬ್ಬರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

ಇಬ್ಬರೂ ಕಾರಿನಲ್ಲಿ ಹೋಗುತ್ತಿದ್ದಾಗ ಅಡ್ಡಗಟ್ಟಿದ ದುಷ್ಕರ್ಮಿಗಳ ಗುಂಪು ರಾಡ್ನಿಂದ ಹಲ್ಲೆ ನಡೆಸಿದೆ. ಹಲ್ಲೆ ಮಾಡಿದವರು ಅನ್ಯಕೋಮಿಗೆ ಸೇರಿದವರು ಎನ್ನಲಾಗಿದೆ. ವಿಷಯ ತಿಳಿದ ಕೂಡಲೇ ಹಲವು ಹಿಂದೂಪರ ಸಂಘಟನೆಗಳ ಸದಸ್ಯರು ಆಸ್ಪತ್ರೆ ಮುಂದೆ ಜಮಾಯಿಸಿ ಕೂಡಲೇ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಮುಂಜಾಗ್ರತಾ ಕ್ರಮವಾಗಿ ಆಸ್ಪತ್ರೆ ಮುಂದೆ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿತ್ತು

By dtv

Leave a Reply

Your email address will not be published. Required fields are marked *

error: Content is protected !!