';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಮಾಣಿ: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಶನ್ ಮಾಣಿ ಸೆಕ್ಟರ್ ಇದರ “ನಿರೀಕ್ಷೆಗಳ ನೀಲ ನಕ್ಷೆ” ಎಂಬ ಸ್ಲೋಗನ್ ನೊಂದಿಗೆ ನಡೆಯುವ ಪ್ರತಿಭೋತ್ಸವ ಕಾರ್ಯಕ್ರಮವು ಅಕ್ಟೋಬರ್ 24 ರಂದು ಆದಿತ್ಯವಾರ ನೇರಳಕಟ್ಟೆ ತಾಜುಲ್ ಫುಖಹಾಅ್ ಬೇಕಲ್ ಉಸ್ತಾದ್ ವೇದಿಕೆಯಲ್ಲಿ ನಡೆಯಲಿದೆ.
ಸಯ್ಯಿದ್ ಸಾಬಿತ್ ಮುಈನೀ ಸಖಾಫಿ ಪಾಟ್ರಕೋಡಿ ಯವರ ಅಧ್ಯಕ್ಷತೆಯಲ್ಲಿ ಹುಸೈನ್ ಮದನಿ ನೇರಳಕಟ್ಟೆ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಸಯ್ಯಿದ್ ಹಂಝ ಅಲ್ ಹಾದಿ ತಂಙಳ್ ಪಾಟ್ರಕೋಡಿ ದುಃಆ ನಡೆಸಿಕೊಡಲಿದ್ದು, ಸಮಾರೋಪ ಸಮಾರಂಭದಲ್ಲಿ ಜಿ ಎಂ ಕಾಮಿಲ್ ಸಖಾಫಿ ಅಧ್ಯಕ್ಷತೆ ವಹಿಸಲಿದ್ದಾರೆ.ಖಾಝಿ ಝೈನುಲ್ ಉಲಮಾ ಮಾಣಿ ಉಸ್ತಾದ್ ನೇತೃತ್ವ ನೀಡುವ ಕಾರ್ಯಕ್ರಮದಲ್ಲಿ, ಮುಹ್ಯಿದ್ದೀನ್ ಕಾಮಿಲ್ ಸಖಾಫಿ ತೋಕೆ ಉದ್ಘಾಟನಾ ಭಾಷಣ ಮಾಡಲಿದ್ದಾರೆ.
ಕಾರ್ಯಕ್ರಮದಲ್ಲಿ ಹಲವಾರು ಉಲಮಾ ಉಮರಾ ನಾಯಕರುಗಳು ಭಾಗವಹಿಸುವರು. ಸೆಕ್ಟರ್ ಅಧೀನದ ಸುಮಾರು ಹತ್ತು ಯುನಿಟ್ ನಿಂದ ಪ್ರತಿಭೆಗಳು ಸ್ಪರ್ಧಿಸಲಿರುವರು ಎಂದು ಪ್ರಕಟಣೆ ತಿಳಿಸಿದೆ.