dtvkannada

'; } else { echo "Sorry! You are Blocked from seeing the Ads"; } ?>

ಜೈಪುರ: ಮನೆಕೆಲಸ ಮಾಡಲಿಲ್ಲ ಎಂದು ಖಾಸಗಿ ಶಾಲೆಯ 7 ನೇ ತರಗತಿ ವಿದ್ಯಾರ್ಥಿಯನ್ನು ಶಿಕ್ಷಕನೊಬ್ಬ ಥಳಿಸಿ ಕೊಂದ ಘಟನೆ ರಾಜಸ್ಥಾನದ ಚುರು ಜಿಲ್ಲೆಯಲ್ಲಿ ನಡೆದಿದೆ. ಆರೋಪಿ ಶಿಕ್ಷಕರನ್ನು ಪೊಲೀಸರು ಬಂಧಿಸಿದ್ದಾರೆ.

ಘಟನೆಯ ಬಗ್ಗೆ ಶಿಕ್ಷಣ ಸಚಿವ ಗೋವಿಂದ ಸಿಂಗ್ ದೋಟಸ್ರಾ ದುಃಖ ವ್ಯಕ್ತಪಡಿಸಿದ್ದು, ಶಾಲೆಯ ಮಾನ್ಯತೆ ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

'; } else { echo "Sorry! You are Blocked from seeing the Ads"; } ?>

13 ವರ್ಷದ ಮೃತ ವಿದ್ಯಾರ್ಥಿ ಗಣೇಶ್, ಖಾಸಗಿ ಶಾಲೆಯಲ್ಲಿ 7ನೇ ತರಗತಿ ವ್ಯಾಸಂಗ ಮಾಡುತ್ತಿದ್ದ. ತಮ್ಮ ಮನೆಗೆಲಸವನ್ನು ಪೂರ್ಣಗೊಳಿಸಿಲ್ಲವೆಂದು ಶಿಕ್ಷಕರು ಆತನ ಮೇಲೆ ತೀವ್ರವಾಗಿ ಥಳಿಸಿದ್ದಾರೆ ಎಂದು ಸಲಸಾರ್ ಪೊಲೀಸ್ ಠಾಣೆಯ ಠಾಣಾಧಿಕಾರಿ ಸಂದೀಪ್ ವಿಷ್ಣೋಯ್ ಹೇಳಿದ್ದಾರೆ.

ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಬಾಲಕನನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಆತ ಮೃತಪಟ್ಟಿದ್ದಾನೆ ಎಂದು ವೈದ್ಯರು ದೃಢಪಡಿಸಿದರು ಎಂದು ವಿಷ್ಣೋಯ್ ಹೇಳಿದ್ದಾರೆ.

'; } else { echo "Sorry! You are Blocked from seeing the Ads"; } ?>

ಆರೋಪಿ ಶಿಕ್ಷಕ ಮನೋಜ್ (35) ವಿರುದ್ಧ ಪ್ರಕರಣ ದಾಖಲಿಸಿ, ಬಂಧಿಸಲಾಗಿದೆ.
‘ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ತನಿಖೆ ಮುಗಿಯುವವರೆಗೂ ಶಾಲೆಯ ಮಾನ್ಯತೆಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಶಿಕ್ಷಣ ಸಚಿವ ದೋಟಸ್ರಾ ಟ್ವೀಟ್ ಮಾಡಿದ್ದಾರೆ.

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!