ಪುತ್ತೂರು: ಪುತ್ತೂರಿನ ಕೊಂಬೆಟ್ಟು ಜೂನಿಯರ್ ಕಾಲೇಜು ವಿದ್ಯಾರ್ಥಿಗಳು ಮನೆಗೆ ತೆರಳುತ್ತಿದ್ದ ವೇಳೆ ಅನ್ಯಕೋಮಿನ ಯುವಕರ ಗುಂಪೊಂದು ಏಕಾಏಕಿ ಬಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾದ ಘಟನೆ ಇಂದು ಸಂಜೆ ಪುತ್ತೂರಿನಲ್ಲಿ ನಡೆದಿದೆ.
ಹಲ್ಲೆಗೊಳಗಾದ ವಿದ್ಯಾರ್ಥಿಗಳನ್ನು ಸಾಲ್ಮರ ನಿವಾಸಿಗಳಾದ ಇಜಾಝ್ ಮತ್ತು ಝಿಯಾದ್ ಎಂದು ಗುರುತಿಸಲಾಗಿದೆ.
ವಿದ್ಯಾರ್ಥಿಗಳನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿಚಾರಣೆ ನಡೆಯುತ್ತಿದೆ ಎಂದು ತಿಳಿದು ಬಂದಿದೆ.