ಪುತ್ತೂರು: ಕಾಲೇಜು ಬಿಟ್ಟು ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಅಪರಿಚಿತ ವ್ಯಕ್ತಿಗಳನ್ನು ಶೀಘ್ರ ಬಂದಿಸಬೇಕೆಂದು ಎಂದು N.S.U.I ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಪೊಲೀಸ್ ಇಲಾಖೆಗೆ ಮನವಿ ಸಲ್ಲಿಸಿದೆ.
ಈ ವಿಚಾರವಾಗಿ ಮಾಧ್ಯಮಗಳ ಜೊತೆ ಮಾತನಾಡಿದ NSUI ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಫಾರೂಕ್ ಬಾಯಬೆ, ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಕೆಲವು ಕಿಡಿಗೇಡಿಗಳು ಹಗಲಿರುಳು ಶ್ರಮಿಸುತ್ತಿದ್ದು, ಅಂತವರಿಂದಾಗಿ ಇಂತಹ ಪ್ರಕರಣಗಳು ಮರುಕಳಿಸುತ್ತಿವೆ.
ಶೈಕ್ಷಣಿಕ ಕ್ಷೇತ್ರದ ಪ್ರಮುಖ ತಾಣ ಪುತ್ತೂರಿನಲ್ಲಿ ಇಂತಹ ಪ್ರಕರಣವು ಆಗದಂತೆ ಪೊಲೀಸ್ ಜಾಗ್ರತಾರಾಗಬೇಕು ಮತ್ತು ತಕ್ಷಣವೇ ಆರೋಪಿಗಳನ್ನ ಬಂಧಿಸಿ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಿಕೊಡಬೇಕೆಂದು ಇಲಾಖೆಗೆ ಮನವಿ ಸಲ್ಲಿಸಿದ್ದಾರೆ.