';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಬೆಳಗಾವಿ: ನಾಲ್ವರು ಮಕ್ಕಳಿಗೆ ವಿಷವುಣಿಸಿ ತಂದೆ ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಬೆಳಗಾವಿ ತಾಲೂಕಿನ ಬೋರಗಲ್ ಗ್ರಾಮದಲ್ಲಿ ನಡೆದಿದೆ.
ಮಕ್ಕಳಾದ ಸೌಮ್ಯಾ ಹಾದಿಮನಿ (19), ಶ್ವೇತಾಹಾದಿಮನಿ (16), ಸಾಕ್ಷಿ ಹಾದಿಮನಿ (11), ಸೃಜನ ಹಾದಿಮನಿಗೆ (8) ವಿಷವುಣಿಸಿ ತಂದೆ ಗೋಪಾಲ ಹಾದಿಮನಿ(46) ಆತ್ಮಹತ್ಯೆಗೆ ಶರಣಾಗಿದ್ದಾರೆ.
ಬ್ಲಾಕ್ ಫಂಗಸ್ನಿಂದ ಪತ್ನಿ ಸಾವನ್ನಪ್ಪಿದ್ದರು. ಇದರಿಂದ ಮನನೊಂದು ನಾಲ್ವರ ಮಕ್ಕಳ ಜತೆ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಬೋರಗಲ್ ಗ್ರಾಮದಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದೆ. ಜುಲೈ 6 ರಂದು ಗೋಪಾಲ್ ಪತ್ನಿ ಜಯಾ ಬ್ಲಾಕ್ ಫಂಗಸ್ ಗೆ ಬಲಿಯಾಗಿದ್ದರು ಎಂದು ಮಾಹಿತಿ ಲಭ್ಯವಾಗಿದೆ. ಸ್ಥಳಕ್ಕೆ ಸಂಕೇಶ್ವರ ಪೊಲೀಸರು ಭೇಟಿ ನೀಡಿದ್ದಾರೆ. ಸಂಕೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.