ದೇವನಹಳ್ಳಿ: ಮದುವೆ ದಿಬ್ಬಣಕ್ಕೆ ಬಂದು ಹೋಗ್ತಿದ್ದ ಬಸ್ ಅಪಘಾತವಾಗಿದ್ದು ಘಟನೆಯಲ್ಲಿ ಓರ್ವ ವ್ಯಕ್ತಿ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ತೊಂಡೆಬಾವಿ ಬಳಿ ನಡೆದಿದೆ. ತೊಂಡೆಬಾವಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಸ್ ಬಿದ್ದಿದೆ.
ಶ್ರೀಕ್ಷೇತ್ರ ಘಾಟಿ ಸುಬ್ರಮಣ್ಯಕ್ಕೆ ಮದುವೆ ಮುಗಿಸಿ ವಾಪಸ್ ಆಗ್ತಿರುವಾಗ ಈ ಘಟನೆ ಸಂಭವಿಸಿದೆ. ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, 20 ಜನರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಬೆಂಗಳೂರು, ಗೌರಿಬಿದನೂರು, ಚಿಕ್ಕಬಳ್ಳಾಪುರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.