';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಬೆಂಗಳೂರು: ನಾಳೆಯಿಂದ ರಾಜ್ಯಾದ್ಯಂತ 1ರಿಂದ 5ನೇ ತರಗತಿವರೆಗೂ ಶಾಲೆಗಳನ್ನು ಪುನಾರಂಭಗೊಳ್ಳುತ್ತಿದ್ದು ಶಾಲೆಗಳನ್ನು ತೆರೆಯಲು ಸಕಲ ಸಿದ್ಧತೆ ನಡೆಸಲಾಗುತ್ತಿದೆ.
ಕೊರೊನಾ 3ನೇ ಅಲೆ ಭೀತಿ ನಡುವೆ ಮಕ್ಕಳ ಶೈಕ್ಷಣಿಕ ಭವಿಷ್ಯದ ದೃಷ್ಟಿಯಿಂದ ತಜ್ಞರ ಸಲಹೆ ಮೇರೆಗೆ ಸೋಮವಾರದಿಂದ ಶಾಲೆಯನ್ನು ಪುನಾರಂಭಿಸಲಾಗುತ್ತಿದೆ. ಅಲ್ಲದೇ ಶಾಲೆಯಲ್ಲಿ ಮಕ್ಕಳು ಹಾಗೂ ಶಿಕ್ಷಕರು ಕಡ್ಡಾಯವಾಗಿ ಮಾಸ್ಕ್, ಸಾಮಾಜಿಕ ಅಂತರ ಮತ್ತು ಸ್ಯಾನಿಟೈಸರ್ ಬಳಕೆ ಸೇರಿದಂತೆ ಹಲವಾರು ನಿಯಮಗಳನ್ನು ಚಾಚು ತಪ್ಪದೇ ಪಾಲಿಸುವಂತೆ ಸರ್ಕಾರ ಸೂಚಿಸಿದೆ.
ಪೋಷಕರು ಹಾಗೂ ಶಿಕ್ಷಕರ ಮೇಲೆ ಜವಾಬ್ದಾರಿ ಹೆಚ್ಚಾಗಿದ್ದು, ಶಾಲೆಗೆ ಬರುವ ಮಕ್ಕಳ ಮೇಲೆ ನಿಗಾ ವಹಿಸಬೇಕಾಗುತ್ತದೆ ಮತ್ತು ಮಕ್ಕಳಲ್ಲಿ ಕೊರೊನಾ ಕುರಿತಂತೆ ಭಯದ ಬದಲು ಜಾಗೃತಿ ಮೂಡಿಸಿ, ಕೊರೊನಾ ನಿಯಮ ಪಾಲಿಸುವಂತೆ ನೋಡಿಕೊಳ್ಳಬೇಕಾಗಿರುತ್ತದೆ ಎಂದು ನಿಯಮಗಳಲ್ಲಿ ಸರಕಾರ ಮತ್ತು ಡಾಕ್ಟರ್ ಗಳ ಸಲಹೆಗಳಲ್ಲಿ ತಿಳಿಸಿದ್ದಾರೆ.