ಪುತ್ತೂರು: ಅನ್ಯಕೋಮಿನ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯವೆಸಗಿದ ಘಟನೆ ಬಡಗನ್ನೂರು ಗ್ರಾಮದ ಮೈಂದನಡ್ಕ ಸಮೀಪ ನಡೆದಿದೆ.
ಆರೋಪಿ ವಿರುದ್ಧ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂದಿಸಲಾಗಿದೆ
ಬಂದಿತ ಆರೋಪಿಯನ್ನು ಬಡಗನ್ನೂರು ಗ್ರಾಮದ ಮೈಂದನಡ್ಕ ನಿವಾಸಿ ಆದಂ(56ವ.) ಎಂದು ತಿಳಿದು ಬಂದಿದೆ. ಸ್ಥಳೀಯ ಬಾಲಕಿಯೋರ್ವರು ಬೀಡಿ ಬ್ರಾಂಚಿಗೆಂದು ಹೋಗುತ್ತಿದ್ದ ವೇಳೆ ಕೃತ್ಯ ಎಸಗಿರುವುದಾಗಿ ಆರೋಪಿಸಲಾಗಿದೆ.
ಘಟನೆ ಕುರಿತು ಸಂಪ್ಯ ಪೊಲೀಸರು ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.